ಖೋಡೆಸ್ ರಮ್ ಕುಡಿದ್ರೆ ಕೊರೊನಾ ಓಡುತ್ತೆ ; ಉಳ್ಳಾಲ ಕಾಂಗ್ರೆಸ್ ಕೌನ್ಸಿಲರ್ ಬಿಟ್ಟಿ ಸಲಹೆ – ಕಹಳೆ ನ್ಯೂಸ್
ಮಂಗಳೂರು: ಖೋಡೆಸ್ ರಮ್ ಕುಡಿದ್ರೆ ಕೊರೊನಾ ವೈರಸ್ ಹತ್ತಿರನೇ ಸುಳಿಯೋದಿಲ್ಲ ಎಂದು ಉಳ್ಳಾಲನಗರ ಸಭೆಯಲ್ಲಿ ಕಾಂಗ್ರೆಸ್ ಕೌನ್ಸಿಲರ್ ಹೇಳಿದ ಬಿಟ್ಟಿ ಉಪದೇಶ ಇದೀಗ ಎಲ್ಲರ ಟೀಕೆಗೆ ಗುರಿಯಾಗಿದೆ. ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ಮದ್ಯದ ಬಾಟಲಿ ಹಿಡಿದುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತಾನು ಕುಡಿಯುವುದಿಲ್ಲ ಎಂದು ಹೇಳಿಕೊಂಡು ಮದ್ಯ ತುಂಬಿದ ಬಾಟಲಿ ಹಿಡಿದು ಜನಸಾಮಾನ್ಯರಿಗೆ ಖೋಡೆಸ್ ರಮ್ ಕುಡಿಯಲು ಸಲಹೆ ನೀಡುತ್ತಿರುವ ವೀಡಿಯೋ ವೈರಲ್...







