Friday, March 13, 2026

ಜಿಲ್ಲೆ

ಕಾಸರಗೋಡುಮಂಜೇಶ್ವರಸುದ್ದಿ

ಇಂದಿನಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ; ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ – ಕಹಳೆ ನ್ಯೂಸ್

ಕಾಸರಗೋಡು, ಜು.17 : ಸಂಪರ್ಕದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 17ರಿಂದ ಜುಲೈ 31 ರ ತನಕ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೂ ನಿಯಂತ್ರಣ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢ ; ಆಸ್ಪತ್ರೆ ಗೇಟ್ ಮುರಿದು ಬಾಣಂತಿ – ಮಗು ಕರೆದೊಯ್ದು ಪತಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜು 17 ;ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪತಿ ಗೇಟ್ ಬೀಗ ಮುರಿದು ಆಸ್ಪತ್ರೆ ಪ್ರವೇಶಿಸಿದ್ದು ಮಗು ಮತ್ತು ಬಾಣಂತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಇಲ್ಲಿನ  ನಾವೂರು ಗ್ರಾಮದ ಮಹಿಳೆ ಬುಧವಾರ ಇಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು.ಈ ಸಂದರ್ಭ ಅವರ ಗಂಟಲದ್ರವ ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು.ಈ ನಡುವೆ ಬುಧವಾರ ರಾತ್ರಿಯೇ ಅವರಿಗೆ ಹೆರಿಗೆ ಆಗಿತ್ತು.ಗುರುವಾರ ಸಂಜೆ ಕೊರೊನಾ...
ಕೊಡಗುಸುದ್ದಿ

ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಲಾಕ್‍ಡೌನ್ ಇಲ್ಲ ; ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ – ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟನೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸುಗಳು ಮಿತಿಮೀರುತ್ತಲೇ ಇವೆ. ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟದ ಮಹಾಮಾರಿ, 7 ದಿನ ಎನ್ನುವಷ್ಟರಲ್ಲೇ 200ರ ಗಡಿಯನ್ನು ದಾಟಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕು ಅನ್ನೋ ಕೂಗು ಕೇಳಿಬಂದಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಲಾಕ್‍ಡೌನ್ ಮಾಡಿದ್ರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಧಿಕಾರಿ...
ಕೊಡಗುಸುದ್ದಿ

ಕೊಡಗಿನಲ್ಲಿ ಅಬ್ಬರಿಸುತ್ತಿದೆ ಮಳೆ ; ಕೊರೊನಾ ಆತಂಕದ ನಡುವೆ ಮಳೆ ಭಯ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ನೆನ್ನೆ ರಾತ್ರಿಯಿಂದ ತುಂತುರು ಮಳೆಯಾಗುತ್ತಿತ್ತು. ಇಂದು ಬೆಳಗ್ಗೆ ಸ್ವಲ್ಪ ವೇಗ ಪಡೆದುಕೊಂಡ ಮಳೆ, ಮಧ್ಯಾಹ್ನದ ನಂತರ ವಿಪರೀತ ಜೋರಾಗಿದೆ. ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ವಿರಾಜಪೇಟೆ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ತುಸು ಜೋರಾಗಿದೆ. ಕೊರೊನಾ ಮಧ್ಯೆ ಮಳೆ ಜೋರಾಗಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ. ಜಿಲ್ಲೆಯ ಜೀವನದಿ ಕಾವೇರಿಯ...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಪಾಸಿಟಿವ್ ಪ್ರಕರಣ ಹೆಚ್ಚಳ ; ಒಂದೇ ದಿನ 109 ಮಂದಿಯಲ್ಲಿ ಸೋಂಕು – ಕಹಳೆ ನ್ಯೂಸ್

ಉಡುಪಿ, ಜು.16 : ಜಿಲ್ಲೆಯಲ್ಲಿ ಗುರುವಾರ ಸೋಂಕಿತಾ ಸಂಖ್ಯೆ ಹೆಚ್ಚಳವಾಗಿದ್ದು, ಒಂದೇ ದಿನ ನೂರರ ಗಡಿದಾಟಿದೆ. ಗುರುವಾರದಂದು 109 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.   ಹಲವು ದಿನಗಳ ನಂತರ ಬುಧವಾರದಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ನಿಯಂತ್ರಣದಲ್ಲಿತ್ತು. ಇದೀಗ ಮತ್ತೆ ಏರಿಕೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಗುರುವಾರದಂದು 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, ಇಂದು 489 ಮಂದಿಯ ವರದಿ ನೆಗೆಟಿವ್ ಬಂದಿದೆ. 594 ಮಂದಿಯ...
ದಕ್ಷಿಣ ಕನ್ನಡಸುದ್ದಿ

ಖಾಸಗಿಯಲ್ಲಿ ಉಚಿತ ಕೊರೊನಾ ಚಿಕಿತ್ಸೆ- ಎಲ್ಲಿ, ಹೇಗೆ ? ; ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಗಳೂರು, ಜು. 16 : ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಜನತೆಯಲ್ಲಿನ ಗೊಂದಲ ದೂರವಾದಂತಾಗಿದೆ.   ಕೊರೊನಾ ಪಾಸಿಟಿವ್ ಹೊಂದಿದ್ದು, ಯಾವುದೇ ರೋಗಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಅದರೊಂದಿಗೆ ಶೌಚಾಲಯ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್

ಬಂಟ್ವಾಳ‌‌‌, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ.   ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್‌ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್‌‌.ವಿ.ಎಸ್‌‌ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್‌ ಶಾಲೆಯಲ್ಲಿ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆಯ 238 ಮಂದಿಗೆ ಕೊರೊನಾ ಪಾಸಿಟಿವ್ ; ಮುಂದುವರಿದ ಮರಣ ಮೃದಂಗ – ಇಂದು ಒಂದೇ ದಿನ ಆರು ಮಂದಿ ಬಲಿ..! – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನ‌ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಮತ್ತೆ ಆರು ಮಂದಿ ಕೊರೊನಾಕ್ಕೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ‌ ಆರು ಮಂದಿ ಕೊರೋನಾ ದಿಂದ ಬಲಿಯಾಗಿದ್ದು, ಮಂಗಳೂರಿನ ಮುಲ್ಕಿ ನಿವಾಸಿ 44 ವರ್ಷದ ವ್ಯಕ್ತಿ, ಬೆಳಗಾವಿಯ ರಾಮದುರ್ಗ ನಿವಾಸಿ 68 ವರ್ಷದ ವೃದ್ಧ, ಮಂಗಳೂರಿನ 62 ವರ್ಷದ ವೃದ್ಧ, ಮಂಗಳೂರಿನ 66 ವರ್ಷದ ವೃದ್ಧ,...
1 926 927 928 929 930 939
Page 928 of 939