Breaking News : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಆರ್ಭಟ ಮುಂದುವರಿದಿದೆ. ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ. ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. ಸದ್ಯ ಮನಪಾ ಆಯುಕ್ತರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,...







