ಅಕ್ಷರಶಃ ನಿಜವಾಗುತ್ತಿದೆ ಕಹಳೆ ನ್ಯೂಸ್ ಸಮೀಕ್ಷೆ – ಅಡಿಕೆ ಬೆಳೆಗಾರರಿಗೆ ಬಿಗ್ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ದರ ದಿನದಿಂದ ದಿನಕ್ಕೆ ಏರಿಕೆ, 320 – 350 ರ ಆಸುಪಾಸಿನಲ್ಲಿ ಅಡಿಕೆ ಖರೀದಿ – ಕಹಳೆ ನ್ಯೂಸ್
ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ ಎಂಬ ವರದಿಯನ್ನು ಕಹಳೆನ್ಯೂಸ್ ಪ್ರಸಾರ ಮಾಡಿತ್ತು, ವರದಿ ಪ್ರಸಾರಕ್ಕೂ ಮುನ್ನ...







