ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್ ರವರು ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು. ವಲಯದ 7 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನೆಯಿಂದ ಯಾವತ್ತೂ ವಿಭಜನೆ ಆಗುವುದಿಲ್ಲ ಎಂದರು. ಭಜನಾ ಪರಿಷತ್...







