ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆ ; ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವ – ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್
ಮಂಗಳೂರು, ಜು 07 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...






