ಖಾಸಗಿ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ದರ ರಿಯಾಯಿತಿಯನ್ನು ನೀಡುವಂತೆ ಉಡುಪಿ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಿಂದ ಮನವಿ-ಕಹಳೆ ನ್ಯೂಸ್
ಉಡುಪಿ: ಖಾಸಗಿ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪ್ರಯಾಣಕ್ಕೆ ಅವಕಾಶವನ್ನು ಈ ಹಿಂದೆಯಿAದಲೂ ನೀಡುತ್ತಾ ಬಂದಿದ್ದು, ಸಧ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರವನ್ನು ಸ್ಥಗಿತಗೊಳಿಸಲಾಗಿದೆ. ಈ ವಿಷಯವಾಗಿ ಕರ್ನಾಟಕ ರಾಜ್ಯ ಖಾಸಗಿ ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಧ್ಯಕ್ಷರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ ೩೦ರ ವರೆಗೆ ಕಾಲೇಜು...







