Breaking News : ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ; ಬಿಜೆಪಿ ವರಿಷ್ಠರಿಗೆ ಪೇಜಾವರ ಶ್ರೀ ಸಲಹೆ – ಕಹಳೆ ನ್ಯೂಸ್
ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕಹಳೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು...







