ಉಡುಪಿ ಜಿಲ್ಲೆಯ ‘ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ’ ನಿಧನ-ಕಹಳೆ ನ್ಯೂಸ್
ಉಡುಪಿ :ಉಡುಪಿ ಜಿಲ್ಲೆಯ ಡಾ.ಬನ್ನಂಜೆ ಗೋವಿಂದಾಚಾರ್ಯ(84) ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ಬೆಳಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ. ದೇಶದ ಪ್ರಮುಖ ವಿದ್ವಾಂಸರದಲ್ಲಿ ಒಬ್ಬರೆನಿಸಿಕೊಂಡಿದ್ದಂತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ್ದರು. ಇವರು ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು.ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಗೋವಿಂದಾಚಾರ್ಯರು ಅನೇಕ ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಶ್ರೀ ಶ್ರೀ ತ್ರಿವಿಕ್ರಮಾಚಾರ್ಯದಾಸರ 'ಆನ೦ದಮಾಲಾ', ತ್ರಿವಿಕ್ರಮ ಪ೦ಡಿತರ...







