Tuesday, September 8, 2026

ಉಡುಪಿ

ಉಡುಪಿಕಾರ್ಕಳಸುದ್ದಿ

ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಮಾರಿಷಸ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಂದನ ಎಸ್. ಭಟ್ ಎಂಬುವವರು ಮೃತಪಟ್ಟಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಳ್ಯಕ್ಕೆ ಅವರ ಮೃತದೇಹ ತರಲು ಸಂಬಂಧಿಕರು ಮತ್ತು ಸಂಸದರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ ಸಹಾಯದಿಂದ...
ಉಡುಪಿಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ 12 ಸರ್ಕಾರಿ ಅಧಿಕಾರಿಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ....
ಉಡುಪಿಕಾರ್ಕಳಕ್ರೈಮ್ಸುದ್ದಿ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ-ಕಹಳೆ ನ್ಯೂಸ್

ಬ್ರಹ್ಮಾವರ : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಪತ್ರಕರ್ತ ಜನಾರ್ದನ್​ ಕೊಡವೂರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​ ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ​ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೊಂದಲದ ಗೂಡಾದ ರಾಜ್ಯ ಸರ್ಕಾರದ ಸಮೀಕ್ಷೆ ; ಸಂಬಂಧವೇ ಇಲ್ಲದ ಹಲವು ಪ್ರಶ್ನೆಗಳಿಂದ ಗೊಂದಲ ಸೃಷ್ಟಿ: ಶ್ರೀನಿಧಿ ಹೆಗ್ಡೆ ಅಭಿಪ್ರಾಯ -ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಗಣತಿಯು ಜನತೆಗೆ ಹಾಗೂ ಗಣತಿ ಮಾಡುತ್ತಿರುವ ಸಿಬ್ಬಂದಿಗಳಿಗೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಅರ್ಥವಿಲ್ಲದ, ಗೊಂದಲಮಯವಾಗಿರುವ ಹಾಗೂ ಸಂಬಂಧವೇ ಇಲ್ಲದ ಹಲವು ಪ್ರಶ್ನೆಗಳನ್ನು ಇದರಲ್ಲಿ ತುರುಕಿಸಿರುವುದು ಎಲ್ಲ ಗೊಂದಲಗಳಿಗೂ ಕಾರಣವಾಗಿದೆ ಎಂದು ಬಿಜೆಪಿ ಉಡುಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹೇಳಿದ್ದಾರೆ. ಸ್ವತಃ ರಾಜ್ಯದ ಉಪ ಮುಖ್ಯಮಂತ್ರಿಯವರೇ ತಮ್ಮ ಮನೆಗೆ ಸಮೀಕ್ಷೆಗೆ ಬಂದವರನ್ನು ಇಷ್ಟೊoದು ಪ್ರಶ್ನೆ ಯಾಕಾಗಿ ಕೇಳುತ್ತೀರಿ, ಇಷ್ಟೊಂದು ಗೊಂದಲ ಯಾಕೇ..??...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ – ಕಹಳೆ ನ್ಯೂಸ್

ಉಡುಪಿ : ಪಕ್ಷದ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ, ವಾಗ್ಮಿ ಎಂ.ಕೆ. ವಿಜಯ ಕುಮಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪಕ್ಷದ ಬೆಳವಣಿಗೆಯ ಸಂದರ್ಭದಲ್ಲಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಅತ್ಯಂತ ಸಕ್ರಿಯವಾಗಿದ್ದುಕೊಂಡು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಭದ್ರ ನೆಲೆ ಇಲ್ಲದ ಕಾಲದಲ್ಲಿಯೂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷ ನಿಷ್ಠೆ ಮೆರೆದಿರುವ ಜೊತೆಗೆ ಸಹಸ್ರಾರು ನಿಷ್ಠಾವಂತ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದ್ದ ಎಮ್.ಕೆ. ವಿಜಯ ಕುಮಾರ್ ಅವರ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ನಗರಸಭೆಯ ಕರ್ವಾಲಿನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ: ಕೋಟ್ಯಂತರ ರೂ. ನಷ್ಟ – ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರಸಭೆಗೆ ಸಂಬಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಇದರಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಇಂದು ಬೆಳಗಿನ ಜಾವ ೩ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಮ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ನೂತನ ಬಿಜೆಪಿ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷ ಇವತ್ತಿನ ಸ್ವರೂಪ ತಾಳಲು ಅನೇಕ ಜನ ಪ್ರತ್ಯಕ್ಷ, ಇನ್ನೂ ಅನೇಕ ಜನರು ಪರೋಕ್ಷ, ಅನೇಕ ಜನರು ನೈತಿಕವಾಗಿ, ಅನೇಕ ಜನರು ಶಾರೀರಿಕವಾಗಿ- ಹೀಗೆ ಎಲ್ಲರೂ ಯೋಗದಾನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಶುಕ್ರವಾರ ಇಲ್ಲಿನ ಜಿಲ್ಲಾ ಕಾರ್ಯಾಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸಿ ಕಟ್ಟಿದ ರೀತಿಯಲ್ಲಿ ಬೇರೆ ಬೇರೆ ಪಕ್ಷಗಳಿಂದ...
1 13 14 15 16 17 124
Page 15 of 124