Sunday, September 6, 2026

ಉಡುಪಿ

ಉಡುಪಿಉದ್ಯೋಗಕಾಸರಗೋಡುದಕ್ಷಿಣ ಕನ್ನಡಶಿಕ್ಷಣಸುದ್ದಿ

ALVA’S PRAGATI 2026 | ಆ. 7, 8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ; ಉಡುಪಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು...
ಉಡುಪಿಕುಂದಾಪುರಜಿಲ್ಲೆ

ಪತ್ರಕರ್ತ ನಾಗೇಶ್ ಗಾಣಿಗ ಅವರಿಗೆ ಕುಂದಾಪುರ ಪತ್ರಕರ್ತರ ಸಂಘದಿಂದ ನುಡಿನಮನ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಗೇಶ್ ಗಾಣಿಗ ಅವರು ನಮ್ಮ ಸಂಘದ ಎಲ್ಲ ಚಟುವಟಿಕೆಗಳಲ್ಲೂ ಸಕ್ರೀಯರಾಗಿ ತೊಡಗಿಸಿಕೊಳ್ಳುತ್ತಿದ್ದರು. ಯಾರೊಂದಿಗೂ ವೈರತ್ವ, ದ್ವೇಷ...
ಉಡುಪಿಕಾಪುಜಿಲ್ಲೆಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್

ಕಾಪು  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಕೃಷಿ ಮೇಲ್ವಿಚಾರಕರಾದ ದೇವೇಂದ್ರ ರವರು ಪರಿಸರ ರಕ್ಷಣೆಯೊಂದಿಗೆ ಗಿಡ ಮರ...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ಮಹಿಳೆಯರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರರ ನಿಂದನೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ನಡೆದ ಕಾರ್ಯಕ್ರಮ ಒಂದರಲ್ಲಿ ಜಗದ್ಗುರು ಶಂಕರಾಚಾರ್ಯರರನ್ನು ನಿಂದನೆ ಮಾಡಿರುವ ಘಟನೆ ವರದಿಯಾಗಿದೆ. ಏಕಾದಶಿಯಂದು ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಇಬ್ಬರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಜಗದ್ಗುರು ಶಂಕರಾಚಾರ್ಯರರ ಕುರಿತು ನಿಂದನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಶಂಕರಾಚಾರ್ಯರರ ಸಿದ್ಧಾಂತವನ್ನು ಪ್ರತಿಪಾದಿಸುವವರು ಹಾಗೂ ಹಿಂದೂ ಪರ ಹೋರಾಟಗಾರರು ಖಂಡಿಸಿದ್ದು, ಕಾನೂನು...
ಉಡುಪಿಜಿಲ್ಲೆಸುದ್ದಿ

ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ : ವಿದ್ಯಾರ್ಥಿ ತಲೆಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್  ಕಂದಕಕ್ಕೆ ಉರುಳಿ ಬಿದ್ದು , ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ. ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ...
ಉಡುಪಿಕಾಪುಜಿಲ್ಲೆಸುದ್ದಿ

ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ -ಕಹಳೆ ನ್ಯೂಸ್

ಕಾಪು  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಕಾಪು ತಾಲೂಕು, ನಿಟ್ಟೆ 'ಬಿ' ಕಾರ್ಯಕ್ಷೇತ್ರದ ಸಹಯೋಗದಲ್ಲಿ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಪ್ರವೀಣ್ ವಹಿಸಿದ್ದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಅಶೋಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಹುಟ್ಟುಹಬ್ಬದಂದು ಒಂದು ಗಿಡವನ್ನು ನೆಟ್ಟು...
ಉಡುಪಿಜಿಲ್ಲೆಸುದ್ದಿ

ಲಯನ್ಸ್ ಕ್ಲಬ್ ಪರ್ಕಳದಿಂದ ‘Relieve the Hunger’ ಸೇವಾ ಕಾರ್ಯಕ್ರಮ: ಹೊಸಬೆಳಕು ಆಶ್ರಮದಲ್ಲಿ 220 ಮಂದಿ ಅಶ್ರಿತರೊಂದಿ ಗೆ ಭೋಜನ -ಕಹಳೆ ನ್ಯೂಸ್

ಉಡುಪಿ : ಲಯನ್ಸ್ ಕ್ಲಬ್ ಪರ್ಕಳದ ವತಿಯಿಂದ ಬೈಲೂರಿನ ಹೊಸಬೆಳಕು ಆಶ್ರಮದಲ್ಲಿ ಬುಧವಾರ ‘Relieve the Hunger’ ಸೇವಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಶ್ರಮದಲ್ಲಿ ಆಶ್ರಯ ಪಡೆದಿರುವ 220 ಮಂದಿ ಮಕ್ಕಳು, ವೃದ್ಧರು ಹಾಗೂ ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಧ್ಯಾಹ್ನದ ಅನ್ನಸಂತರ್ಪಣೆ ನಡೆಸಲಾಯಿತು. ಬಳಿಕ ಕ್ಲಬ್ ಸದಸ್ಯರು ಆಶ್ರಮದ ನಿವಾಸಿಗಳೊಂದಿಗೆ ಆತ್ಮೀಯವಾಗಿ ಬೆರೆತು ಅವರ ಯೋಗಕ್ಷೇಮ ವಿಚಾರಿಸಿ ಮಾನವೀಯ ಸೇವೆಯ ಸಂದೇಶ ಸಾರಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ...
ಉಡುಪಿಜಿಲ್ಲೆಸುದ್ದಿ

ಪ್ರಜಾಪ್ರಭುತ್ವ ದಲ್ಲಿ ಕಾನೂನು ಚೌಕಟ್ಟಿನೊಳಗೆ ನ್ಯಾಯ ಮತ್ತು ಸಮಾನತೆ ಯಿಂದ ಸರಕಾರಿ ಕೆಲಸ ಮಾಡಿದಾಗ ಗೌರವ ತಾನಾಗಿ ಬರುತ್ತದೆ – ಕಾಪು ಪೊಲೀಸ್ ನಿವೃತ್ತ ನಿರೀಕ್ಷಕ ಅಜಮತ್ ಆಲಿ -ಕಹಳೆ ನ್ಯೂಸ್

ಉಡುಪಿ : ಸಾರ್ವಜನಿಕ ಸೇವೆಯಲ್ಲಿರುವ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗೃಹರಕ್ಷಕದಳದ ಸಿಬಂಧಿಗಳ ಸೇವೆಯನ್ನು ನಾಗರಿಕರು ಗುರುತಿಸುವ ಗೌರವಿಸುವ ಕಾರ್ಯ ನಿಜಕ್ಕೂ ಇಲಾಖೆಗೆ ಹೆಮ್ಮೆ ತರುವಂತಹುದಾಗಿದೆ. ಕಾನೂನು ಚೌಕಟ್ಟಿನೊಳಗೆ ಸಮಾಜದೊಂದಿಗೆ ಜನಸ್ನೇಹಿಯಾಗಿ ಸರಕಾರಿ ಸಿಬಂಧಿಗಳು ಕೆಲಸ ಮಾಡಿದಾಗ ಮಾತ್ರ ಇಂತಹ ಗೌರವಗಳು ದೊರೆಯಲು ಸಾಧ್ಯ ಎಂದು ಕಾಪು ಪೊಲೀಸ್ ವೃತ್ತನಿರೀಕ್ಷಕ ಅಜಮತ್ ಆಲಿ ತಿಳಿಸಿದ್ದಾರೆ. ಕಟಪಾಡಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ, ಕಟಪಾಡಿಯ ವಿವಿಧ ಸಂಘ ಸಂಸ್ಥೆಗಳು ಮತ್ತು ಸಮಸ್ತ ನಾಗರಿಕರ...
1 2 3 4 124
Page 2 of 124