Tuesday, September 8, 2026

ಉಡುಪಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : `ಮಹೇಶ್ ಶೆಟ್ಟಿ ತಿಮರೋಡಿ’ ಪೊಲೀಸರ ವಶಕ್ಕೆ.- ಕಹಳೆ ನ್ಯೂಸ್

ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ಪತ್ರಕರ್ತರಾದ ಕುಮಾರಸ್ವಾಮಿ ನುಡಿನಮನ ಸಲ್ಲಿಸಿ, ಮಂಜುನಾಥ್ ಭಟ್ ಕಷ್ಟದಿಂದ ಬೆಳೆದು ಬಂದವರು. ವಿದ್ಯಾರ್ಥಿ ಜೀವನದಲ್ಲಿ ಹಿರಿಯ ಸಾಹಿತಿಗಳ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ಅವರು ಸಾಹಿತ್ಯದತ್ತ ಒಲವು ಬೆಳೆಸಿಕೊಂಡರು. ಉಪ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ವಿದ್ಯಾರಣ್ಯ ಅಂಗಳದಲ್ಲಿ ʼಮುದ್ದುಕೃಷ್ಣʼರ ಕಲರವ ; ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಕ್ಕಳಿಗೆ ಸಮಗ್ರ ವ್ಯಕ್ತಿತ್ವ -‘ಸು ಫ್ರಮ್ ಸೋ’ ರವಿಯಣ್ಣ -ಕಹಳೆ ನ್ಯೂಸ್

ಕುಂದಾಪುರ: ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋ’ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಹೇಳಿದರು. ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಅವರು, “ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ...
ಉಡುಪಿಜಿಲ್ಲೆಸುದ್ದಿ

ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಮೇಳಕ್ಕೆ ಹತ್ತು ವರ್ಷ ಒಂದು ಮಹಾನ್ ಸಾಧನೆ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು -ಕಹಳೆ ನ್ಯೂಸ್

ಉಡುಪಿ : ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ದ್ಯುತಿಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಹಾಗೂ ನಮ್ಮ ಕಲಾಕೇಂದ್ರ ಕೋಟೇಶ್ವರ ಇವರ ಜಂಟಿ...
ಉಡುಪಿಜಿಲ್ಲೆಸುದ್ದಿ

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ -ಕಹಳೆ ನ್ಯೂಸ್

ಉಡುಪಿ : ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ...
ಆರೋಗ್ಯಉಡುಪಿಜಿಲ್ಲೆಸುದ್ದಿ

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಖ್ಯಾತ ಹೃದ್ರೋಗ ತಜ್ಞ ಡಾ. ರಂಜನ್ ಶೆಟ್ಟಿ ನೇತೃತ್ವದಲ್ಲಿ ಉಡುಪಿಯಲ್ಲಿ ವಿಶೇಷ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಉಡುಪಿ : ಭಾರತದಲ್ಲಿ ಯುವಜನರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಮತ್ತು ಇತರ ಹೃದ್ರೋಗಗಳಿಗೆ ತುತ್ತಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಅಧಿಕ ಕೊಲೆಸ್ಟ್ರಾಲ್ ಮತ್ತು ರಕ್ತನಾಳಗಳಲ್ಲಿನ ಅಡಚಣೆಯಂತಹ ಸಮಸ್ಯೆಗಳು ಬಾಲ್ಯದಿಂದಲೇ ಆರಂಭವಾಗಬಹುದು ಎಂಬುದು ಈ ಬೆಳವಣಿಗೆಯಿಂದ ಸ್ಪಷ್ಟವಾಗಿದೆ. ಈ ಗಂಭೀರ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಬೆಂಗಳೂರಿನ ಇನ್ನೆಂಟ್ರಿ ರಸ್ತೆಯಲ್ಲಿರುವ ಸ್ಪರ್ಶ್ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. (ಪ್ರೊ) ರಂಜನ್ ಶೆಟ್ಟಿ ಅವರು,...
ಉಡುಪಿಜಿಲ್ಲೆಸುದ್ದಿ

ಮೀನುಗಾರರು ಸುರಕ್ಷತೆಗೆ ಒತ್ತು ನೀಡಿ: ಲಕ್ಷ್ಮಿ ಹೆಬ್ಬಾಳಕರ -ಕಹಳೆ ನ್ಯೂಸ್

ಉಡುಪಿ: 'ನಿಮ್ಮ ಸುರಕ್ಷತೆ ನಿಮ್ಮ ಜವಾಬ್ದಾರಿ ಎಂದು ಅರಿತುಕೊಂಡು ಮೀನುಗಾರರು ಮೀನುಗಾರಿಕೆಗೆ ತೆರಳುವ ವೇಳೆ ತಪ್ಪದೆ ಜೀವ ರಕ್ಷಕ ಸಾಧನಗಳನ್ನು ಬಳಸಬೇಕು. ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲಿರುತ್ತದೆ, ಅವರನ್ನು ಅನಾಥರನ್ನಾಗಿಸಬೇಡಿ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ 'ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ' ಕುರಿತು ಗುರುವಾರ ಹಮ್ಮಿಕೊಂಡಿದ್ದ...
ಉಡುಪಿಜಿಲ್ಲೆಸುದ್ದಿ

10 ಸಾವಿರ ಗೌರವಧನ ನೀಡಿ: ಆಶಾ ಕಾರ್ಯಕರ್ತೆಯರ ಧರಣಿ -ಕಹಳೆ ನ್ಯೂಸ್

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಯಿತು. ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ. ಭಟ್‌ ಮಾತನಾಡಿ, ಮುಖ್ಯಮಂತ್ರಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹10 ಸಾವಿರ ಗೌರವನಿಧಿಯನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಬೇಕು ಎಂದು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ...
1 18 19 20 21 22 124
Page 20 of 124