Tuesday, September 8, 2026

ಉಡುಪಿ

ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
ಉಡುಪಿಜಿಲ್ಲೆಸುದ್ದಿ

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ರಿಂದ ಚಾಲನೆ -ಕಹಳೆ ನ್ಯೂಸ್

ಉಡುಪಿ: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ 'ಮನೆ ಮನೆಗೆ ಪೊಲೀಸ್‌' ಕಾರ್ಯಕ್ರಮಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸ್ ಸೇವೆ ಪ್ರತಿ ಮನೆಗೂ ತಲುಪಲಿ. ಪೊಲೀಸ್ ತಂಡಗಳ ಈ ಕಾರ್ಯ ಯಶಸ್ವಿಯಾಗಲಿ ಎಂದು...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಯತ್ನಶೀಲತೆ ಮೊದಲ ಗೆಲುವು: ಸಿ.ಎ. ಗೋಪಾಲ ಕೃಷ್ಣ ಭಟ್ -ಕಹಳೆ ನ್ಯೂಸ್

ಮಣಿಪಾಲ : ಎಂತಹ ಕಷ್ಟದ ದಾರಿಯಿದ್ದರೂ ಆತ್ಮವಿಶ್ವಾಸದ ಪ್ರಯತ್ನಶೀಲತೆ ಮೊದಲ ಗೆಲುವಿದ್ದಂತೆ, ಅರ್ಧ ಸಾಧಿಸಿದಂತೆ, ಉಳಿದರ್ಧ ಆ ಪ್ರಯತ್ನಶೀಲತೆಯೇ ನಮ್ಮನ್ನು ಸಾಧಿಸುವಂತೆ ಪ್ರೇರೇಪಿಸುತ್ತದೆ ಎಂದು ತ್ರಿಷಾ ಸಮೂಹ ಶಿಕ್ಷಣ ಸಂಸ್ಥಗಳ ಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸಕ್ತ...
ಉಡುಪಿಸುದ್ದಿ

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ : ಪಡುವಲಪಾಯ ಯಕ್ಷಗಾನಕ್ಕೆ ಉತ್ತಮ ಭವಿಷ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವಿಶ್ವಾಸ- ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ವಿವಿಯ ಡಾ. ಪಿ....
ಉಡುಪಿಕಾರ್ಕಳಜಿಲ್ಲೆಶಿಕ್ಷಣಸುದ್ದಿ

ವೃತ್ತಿಪರ ಮಾರ್ಗದರ್ಶನ ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್ -ಕಹಳೆ ನ್ಯೂಸ್

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹುಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ...
ಉಡುಪಿಜಿಲ್ಲೆಸುದ್ದಿ

ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ದಶಾವತಾರ ದ್ವಾರಬಂಧ ಪತ್ತೆ -ಕಹಳೆ ನ್ಯೂಸ್

ಉಡುಪಿ: ತಾಲ್ಲೂಕಿನ ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ದಶಾವತಾರ ಶಿಲ್ಪ ಪಟ್ಟಿಕೆಯ ದ್ವಾರಬಂಧ ಕಂಡುಬಂದಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂಚಿನ ದ್ವಾರಬಂಧವು ಸುಮಾರು 4.5 ಅಡಿ ಎತ್ತರ ಮತ್ತು 3.5 ಅಡಿ ಅಗಲವಿದೆ. ಅಡ್ಡಪಟ್ಟಿಕೆಯ ಮೇಲೆ ಗಜಲಕ್ಷ್ಮಿಯ ಲಲಾಟ ಬಿಂಬವಿದೆ. ಎಡ- ಬಲದ ಲಂಭ ಪಟ್ಟಿಕೆಗಳ ಮೇಲೆ ಕ್ರಮವಾಗಿ ಅಂಜಲೀ ಮುದ್ರೆಯಲ್ಲಿ ನಿಂತಿರುವ ಆಂಜನೇಯ,...
ಉಡುಪಿಜಿಲ್ಲೆಸುದ್ದಿ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಆಯೋಜಿಸಿದ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ – ಕಹಳೆ ನ್ಯೂಸ್

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಭೌತಶಾಸ್ತç ಉಪನ್ಯಾಸಕರ ವೇದಿಕೆಯ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಆಯೋಜಿಸಿದ ಉಡುಪಿ ಜಿಲ್ಲಾ ಭೌತಶಾಸ್ತç ಉಪನ್ಯಾಸಕರ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕರಾದ ಶ್ರೀ ಮಾರುತಿ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಸಮಯನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ಡಾಕ್ಟರ್ ಪುನೀತ್ – ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ವೈದ್ಯ ದಿನಾಚರಣೆಯನ್ನು ನೆರವೇರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನದೊಂದಿಗೆ ವೈದ್ಯರಿಗೆ ಗೌರವವನ್ನು ಅರ್ಪಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀಯುತ ಯುವರಾಜ್ ಜೈನ್ ರವರು ಉಪಸ್ಥಿತರಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳ ಜೀವನದ ಘಟನೆಗಳನ್ನು ಸ್ಮರಿಸುವ ಮೂಲಕ ವೈದ್ಯ ವೃತ್ತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾಕ್ಟರ್ ಪುನೀತ್ ರವರು ಮಾತನಾಡಿ ಸಮಯ ನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ಎಂದು ಹೇಳುವ ಮೂಲಕ...
1 21 22 23 24 25 124
Page 23 of 124