ಜಿಲ್ಲೆಯಲ್ಲಿ ಶೀಘ್ರ ಶಿವಾಜಿ ಪ್ರತಿಮೆ ನಿರ್ಮಾಣ: ಶಾಸಕ ಯಶ್‌ಪಾಲ್-ಕಹಳೆ ನ್ಯೂಸ್
ಉಡುಪಿ: 'ಉತ್ತಮ ಆಡಳಿತ ನೀಡಿದ ಹಿಂದೂ ಮಹಾಕ್ರಾಂತಿಕಾರಿ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುವುದು' ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಮಲ್ಪೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ವಿ. ನಾಯಕ್ ಮಾತನಾಡಿ, 'ಅಂದಿನ ಕಾಲಘಟ್ಟದಲ್ಲಿ...







