Tuesday, April 28, 2026

ಉಡುಪಿ

ಉಡುಪಿಸುದ್ದಿ

ಸಂಕಷ್ಟದಲ್ಲಿರುವ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಕಡೆಗೆ ಅರುಣ್ ಕುಮಾರ್ ಪುತ್ತಿಲ ಲಕ್ಷ್ಯ ; ಲಕ್ಷ ರೂಪಾಯಿ ಚಕ್ ನೀಡಿ ಗೌರವ..!! – ಕಹಳೆ ನ್ಯೂಸ್

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು. ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳ ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ ; ಪ್ರಕರಣ ದಾಖಲು- ಕಹಳೆ ನ್ಯೂಸ್

ಕಾರ್ಕಳ, ಸೆ.30 : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಜು.13ರಂದು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಸಾವನ್ನಪ್ಪಿದ್ದರು. ಇವರ ಪತ್ನಿ ಮತ್ತು ಮಕ್ಕಳು ಕೋವಿಡ್ ಲಾಕ್‌ಡೌನ್‌ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಅಮೆರಿಕಾ ದಿಂದ ಕಾರ್ಕಳಕ್ಕೆ ಬರಲು ಸಾಧ್ಯವಾಗಿರಲಿಲ್ಲ....
ಉಡುಪಿಕುಂದಾಪುರಸುದ್ದಿ

ಕುಂದಾಪುರ: ಕುಂದಾಪುರದ ಜನ ಹೃದಯವಂತರು – ಸೈಕಲ್ ಜಾಥ ಉದ್ಘಾಟಿಸಿದ ಕೋಟ ಶ್ರೀನಿವಾಸ್ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,, ಎಂ.ಜಿ.ಫ್ರೆAಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥ “ಯೋಧ-2024” ಕಾರ್ಯಕ್ರಮಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದ ಜನ ಹೃದಯವಂತರು...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

50 ರೂಪಾಯಿಗೆ ಏರಿಕೆಯಾದ ತೆಂಗಿನ ಕಾಯಿ ಬೆಲೆ ; ರೈತರಿಗೆ ಪ್ರಯೋಜನಕ್ಕೆ ಬಾರದ ಬೆಲೆ ಏರಿಕೆ – ಕಹಳೆ ನ್ಯೂಸ್

ಉಡುಪಿ ಸೆಪ್ಟೆಂಬರ್ 28 : ತೆಂಗಿನ ಕಾಯಿ ಬೆಲೆ ಇದೀಗ ಡಬಲ್ ಆಗಿದೆ. ಕೆಲವು ತಿಂಗಳ ಹಿಂದೆ 25 ರೂಪಾಯಿಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಇದೀಗ 50 ರೂಪಾಯಿಗೆ ಏರಿಕೆಯಾಗಿದೆ ಆದರೆ ರೈತನಿಗೆ ಮಾತ್ರ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸೆಪ್ಟಂಬರ್‌ ತಿಂಗಳ ಆರಂಭದಿಂದಲೇ ತೆಂಗಿನ ಕಾಯಿಗೆ ಬೇಡಿಕೆ ವ್ಯಕ್ತವಾಗಿದೆ. ಅದರ ಜೊತೆಗೆ ಕೊಬ್ಬರಿ, ಕೊಬ್ಬರಿ ಎಣ್ಣೆಗೂ ಬೇಡಿಕೆ ಬಂದಿದೆ. ಹೀಗಾಗಿ ಕೊಬ್ಬರಿ, ತೆಂಗಿನ ಕಾಯಿ ಬೆಲೆಯಲ್ಲೂ ದಿಢೀರ್ ಏರಿಕೆ ಕಂಡುಬಂದಿದ್ದು, ರೈತರು...
ಉಡುಪಿಶಿಕ್ಷಣಸುದ್ದಿ

‘ಸಾಮಾಜಿಕ ಅಸ್ಥಿರತೆ ಬಾಲ್ಯ ವಿವಾಹಕ್ಕೆ ಕಾರಣ’-ಕಹಳೆ ನ್ಯೂಸ್

ಉಡುಪಿ: 'ಸಾಮಾಜಿಕ ಅಸ್ಥಿರತೆಯಿಂದಾಗಿ ಇಂದಿಗೂ ಬಾಲ್ಯವಿವಾಹ ಪದ್ಧತಿ ನಮ್ಮ ಸಮಾಜದಲ್ಲಿದೆ' ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣವರ್‌ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಢಾವೊ ಅಭಿಯಾನದ ಪ್ರಯುಕ್ತ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನ್ಯಾಯಾಲಯ ಹಾಗೂ ಪೊಲೀಸ್‌ ಠಾಣೆ...
ಉಡುಪಿಬೈಂದೂರುಸುದ್ದಿ

ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ -ಕಹಳೆ ನ್ಯೂಸ್

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 4:30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಅವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು....
ಉಡುಪಿಮೂಡಬಿದಿರೆಸುದ್ದಿ

ಎಲ್ಲರಿಗೂ ಸಮಾನ ನ್ಯಾಯ ಒದಗಿಸುವುದೇ ಪೋಲಿಸ್ ಇಲಾಖೆಯ ಮುಖ್ಯ ಧ್ಯೇಯ :-ಸಂದೇಶ್ ಪಿ ಜಿ ಅಭಿಮತ-ಕಹಳೆ ನ್ಯೂಸ್

ಮೂಡುಬಿದಿರೆ: ಪೋಲಿಸ್ ಕೆಲಸ ತುಂಬಾ ಪವಿತ್ರವಾದ ಕೆಲಸ, ಎಲ್ಲಿ ಮನುಷ್ಯರಿರುತ್ತಾರೆಯೋ ಅಲ್ಲಿ ಗಲಾಟೆ, ಗಲಭೆಗಳಿರುತ್ತವೆ. ಆದರೆ ಅವೆಲ್ಲವನ್ನು ಹಿಡಿತಕ್ಕೆ ತಂದು ಸಾರ್ವಜನಿಕರಲ್ಲಿ ಶಾಂತಿಯ ಬದುಕು ನಿರ್ಮಿಸುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸುವುದೇ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ ಎಂದು ಮೂಡುಬಿದಿರೆಯ ಪೊಲೀಸ್ ವೃತ್ತ ನಿರೀಕ್ಷಕರಾದ ಸಂದೇಶ್ ಪಿ ಜಿ ಯವರು ಅಭಿಪ್ರಾಯಪಟ್ಟರು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೊಲೀಸ್ ಸಹಕಾರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...
ಉಡುಪಿಉತ್ತರಕನ್ನಡರಾಜ್ಯಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ : ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.   ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ...
1 45 46 47 48 49 120
Page 47 of 120