Friday, March 6, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ...
ಅಂಕಣಉಡುಪಿಸುದ್ದಿ

ನ. 28ರಂದು ; ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ-ಕಹಳೆ ನ್ಯೂಸ್

ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ...
ಉಡುಪಿಸುದ್ದಿ

ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ -ಕಹಳೆ ನ್ಯೂಸ್

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ...
ಉಡುಪಿಜಿಲ್ಲೆಸುದ್ದಿ

ದೇವರ ನಾಡು ಶ್ರೀಕೃಷ್ಣ ನ ಸನ್ನಿದಿ ಉಡುಪಿಗೆ ನವೆಂಬರ್ 28ರಂದು ಪ್ರಧಾನಿ ಮೋದಿ ಭೇಟಿ – ಕಹಳೆ ನ್ಯೂಸ್

ಉಡುಪಿ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ವೇಗವಾಗಿ ಸಾಗುತ್ತಿದೆ. ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿಂದೆ ಪ್ರಧಾನಿಯವರ ಸ್ವಾಗತಕ್ಕಾಗಿ ರೋಡ್ ಶೋ...
ಉಡುಪಿಬೈಂದೂರುಸುದ್ದಿ

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!-ಕಹಳೆ ನ್ಯೂಸ್

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ. ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್ (31) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು (73) ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ...
ಉಡುಪಿಯಕ್ಷಗಾನ / ಕಲೆಸಂತಾಪಸುದ್ದಿ

ಮಹಿಷಾಸುರ ಪಾತ್ರ ನಿರ್ವಹಿಸಿದ್ದ ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ...
ಉಡುಪಿಸುದ್ದಿ

 ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ : ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್-ಕಹಳೆ ನ್ಯೂಸ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು....
ಉಡುಪಿಸುದ್ದಿ

National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್- ಕಹಳೆ ನ್ಯೂಸ್

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನ.15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನವೆಂಬರ್ 16 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025 ಬ್ಯೂಟಿ ಕಾಂಟೆಸ್ಟ್‌ನಲ್ಲಿ ಮೊದಲ ರನ್ನರ್...
1 3 4 5 6 7 118
Page 5 of 118