ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭ-ಕಹಳೆ ನ್ಯೂಸ್
ಉಡುಪಿ : ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ ಮತ್ತು ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಸದಾನಂದ ಸಭಾಂಗಣದಲ್ಲಿ ಆ.೩೧ ರಂದು ನಡೆದ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 'ನಾವು ಅಂದುಕೊಂಡದ್ದು ನಡೆದೇ ನಡೆಯುತ್ತದೆ ಎನ್ನಲಾಗದು....







