Thursday, July 23, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ಕೇರಳ ಕುಟ್ಟಿಗಳ ಹುಚ್ಚಾಟ – ಮದ್ಯ ಸೇವಿಸಿ ಮನಬಂದಂತೆ ವರ್ತನೆ -ಕಹಳೆ ನ್ಯೂಸ್

ಉಡುಪಿ : ನಡುರಸ್ತೆಯಲ್ಲೇ ವಿದ್ಯಾರ್ಥಿಗಳ ಗುಂಪೊಂದು ಕುಡಿದು ನಡು ರಸ್ತೆಯಲ್ಲೇ, ಪಟಾಕಿ ಸಿಡಿಸಿ ಅಶಾಂತಿ ಉಂಟುಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಕೇರಳದಿಂದ ಉಡುಪಿ ಕಡೆ ಪ್ರವಾಸಕ್ಕಾಗಿ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಬಂದಿದ್ದು, ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿ ಮದ್ಯಸೇವನೆ ಮಾಡಿದ ವಿದ್ಯಾರ್ಥಿಗಳು ಸಾರ್ವಜನಿಕ ರಸ್ತೆಯಲ್ಲೇ ಕುಣಿದು, ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ್ದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ. ನಡುರಸ್ತೆಯಲ್ಲಿನ...
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಜಿತ್ ಆರಾಡಿ, ಉದಯ ಶಂಕರ್ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಫೆ. 3ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರುಗಳಾಗಿ ಉಡುಪಿಯ ಅಜಿತ್ ಆರಾಡಿ ಹಾಗೂ ಬೈಂದೂರಿನ ಉದಯ ಶಂಕರ್ ಪಡಿಯಾರ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ...
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಸಂಘದ 2021–25ನೇ ಸಾಲಿನ ಲೆಕ್ಕಚಾರವನ್ನು ನಿಕಟಪೂರ್ವ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಸಭೆಗೆ ಮಂಡಿಸಿದರು. ಈ ಅವಧಿಯಲ್ಲಿ ಉಳಿಸಿದ 77,323 ರೂ. ನಗದು...
ಉಡುಪಿಜಿಲ್ಲೆಸುದ್ದಿ

ಹಿರಿಯಡಕ: ಸ್ಕೂಟಿಗೆ ಡಿಕ್ಕಿಯಾದ ಇನ್ನೋವಾ ಕಾರು: ಪವಾಡಸದೃಶ ರೀತಿಯಲ್ಲಿ ಬದುಕುಳಿದ ಇಬ್ಬರು ಸವಾರರು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ -ಕಹಳೆ ನ್ಯೂಸ್

ಉಡುಪಿ: ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ. ಇನ್ನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಸ್ಕೂಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಉಡುಪಿಜಿಲ್ಲೆದಕ್ಷಿಣ ಕನ್ನಡಬೈಂದೂರುಸುದ್ದಿ

ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮ

ಬೈಂದೂರು ಉತ್ಸವ – 2026ರಲ್ಲಿ ಸೇವಾಭಾರತಿ ತಂಡ ಭಾಗವಹಿಸುವಿಕೆ ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ, ಸಂಸ್ಥೆಯ ವಿವಿಧ ಯೋಜನೆಗಳ ಸೇವಾ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು. ಬೈಂದೂರು ಉತ್ಸವದಲ್ಲಿ ಸಂಸ್ಥೆಯ ಖಜಾಂಚಿ ಹಾಗೂ ಸೇವಾಧಾಮದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ! : ಸಂವಿಧಾನದಲ್ಲಿನ ಜವಾಬ್ದಾರಿಗಳ ಅರಿವು ಅತ್ಯಗತ್ಯ- ಡಾ.ರಮೇಶ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ : ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಉಡುಪಿಜಿಲ್ಲೆಮಂಗಳೂರುಸುದ್ದಿ

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಮುಷ್ಕರ -ಕಹಳೆ ನ್ಯೂಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಜಿಲ್ಲಾ ಸಂಚಾಲಕ ವಿನ್ಸೆಂಟ್ ಡಿಸೋಜ ಅವರು ಬ್ಯಾಂಕಿಂಗ್‌ ವಲಯದಲ್ಲಿ ವಾರಕ್ಕೆ 5 ದಿನ ಕೆಲಸದ ದಿನಗಳ ವ್ಯವಸ್ಥೆ ಜಾರಿಗೆ ತರಬೇಕೆಂದು ಬೇಡಿಕೆ ಸಲ್ಲಿಸಲಾಗುತ್ತಿದ್ದರೂ, ಈವರೆಗೂ ಜಾರಿಗೆ ಬಂದಿಲ್ಲ ಎಂದು...
1 4 5 6 7 8 123
Page 6 of 123