Monday, May 4, 2026

ಉಡುಪಿ

ಉಡುಪಿಸುದ್ದಿ

ಜುಲೈ 1ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಣಿಪಾಲ ಎಂಐಸಿ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ಇದರ ಪ್ರೋಫೆಸರ್ ಆಫ್ ಪ್ರಾಕ್ಟಿಸ್ ಸತ್ಯಬೋಧ ಜೋಶಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ...
ಉಡುಪಿಶಿಕ್ಷಣಸುದ್ದಿ

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗೆ ತೃತೀಯ ಸ್ಥಾನ-ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ದೇರೆಬೈಲು ವಾಸುದೇವ ತಂತ್ರಿ ಇವರಿಗೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟವರು ಬೆಂಗಳೂರಿನ ರಾಜಭವನದಲ್ಲಿ ಸನ್ಮಾನಿಸಿದರು. ಮಾರ್ಚ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವು ವಿಜಯವೈಜಯಂತಿ ಪುರಸ್ಕಾರವನ್ನು ಪಡೆದಿತ್ತು. ಕರ್ನಾಟಕದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುವ ಶ್ರೀಮತಿ ಅಹಲ್ಯಾ ಶರ್ಮಾ ಇವರು ಉಪಸ್ಥಿತರಿದ್ದರು....
ಉಡುಪಿಸುದ್ದಿ

ಮಾಹೆ ಮತ್ತು ಫಿಟ್‌ವಿಬ್‌ ಸಹಭಾಗಿತ್ವದಲ್ಲಿ ಮಲ್ಪೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ – ಕಹಳೆ ನ್ಯೂಸ್

ಮಣಿಪಾಲ - ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ನ ವಿದ್ಯಾರ್ಥಿ ವ್ಯವಹಾರಗಳ ವಿಭಾಗ ಮತ್ತು ಕೆಎಂಸಿಯ ಫಿಟ್‌ನೆಸ್‌ ಕ್ಲಬ್‌ ಜಂಟಿಯಾಗಿ ಮಲ್ಪೆಯ ಕದಿಕೆ ಬಳಿಯ ಸಮುದ್ರಕಿನಾರೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಿತು. ಮಾದಕವ್ಯಸನದ ವಿರುದ್ಧ ಮಾನಸಿಕ ಜಾಗೃತಿಯನ್ನು ಮೂಡಿಸುವ ಕುರಿತು ಆಶಯವನ್ನು ಕೂಡ ಈ ಕಾರ್ಯಕ್ರಮವು ಹೊಂದಿತ್ತು. ಮಾಹೆಯ ಯೋಜನೆ ಮತ್ತು ನಿಯಂತ್ರಣ ವಿಭಾಗದ ನಿರ್ದೇಶಕ ಡಾ. ರವಿರಾಜ್‌ ಎನ್‌. ಎಸ್‌. ಅವರು ಮುಖ್ಯ ಅತಿಥಿಗಳಾಗಿದ್ದು, ‘ಪ್ರತಿಯೊಬ್ಬನ ದಿನನಿತ್ಯದ ಜೀವನದಲ್ಲಿ...
ಉಡುಪಿಸುದ್ದಿ

ಉದ್ಘಾಟನೆಯ ಮುನ್ನವೇ ಕುಸಿತ ಕಂಡ 60ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ– ಕಹಳೆ ನ್ಯೂಸ್

ಉಡುಪಿ : ನಗರಸಭೆ ಮತ್ತು ಉಡುಪಿ ಕೆರೆ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಅನುದಾನದಲ್ಲಿ ಸುಮಾರು ಅಂದಾಜು 60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆಯಾಗುವ ಮುನ್ನವೇ ಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು ಹೋಗುವ ಕಲ್ಲಿನ ಕೊಂಡಿಸಿಕ್ಕಿದ್ದು, ನಾಥ ಪಂಥಕ್ಕೆ ಸೇರಿದ ವಸ್ತುಗಳಾಗಿವೆ ಎಂಬುದು ತಜ್ಞರ ಮಾತು.ಈ ವಸ್ತುಗಳು 12ನೇ ಶತಮಾನಕ್ಕೆ...
ಉಡುಪಿಸುದ್ದಿ

ಹೆಬ್ರಿ : ಬೈಕ್‌ ಗೆ ಕಾರು ಡಿಕ್ಕಿ : ಬೈಕ್‌ ಸವಾರ ಮೃತ್ಯು – ಕಹಳೆ ನ್ಯೂಸ್

ಹೆಬ್ರಿ : ಬೈಕ್‌ ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ ಸೇತುವೆಯಿಂದ ಸ್ವಲ್ಪ ಮುಂದೆ ತಲುಪುವಾಗ ಅಜೆಕಾರು ಕಡೆಯಿಂದ ಹೆಬ್ರಿ ಕಡೆಗೆ ಸಾಗುತ್ತಿದ್ದ ಆಲ್ಡೊ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸವರಾರಿಬ್ಬರು ರಸ್ತೆಗೆ ಬಿದ್ದು, ಗಾಯಗೊಂಡಿದ್ದರು. ವಿಶ್ವನಾಥ ಅವರು...
ಉಡುಪಿಕ್ರೈಮ್ಸುದ್ದಿ

ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ :ಜೈಲು ಅಧೀಕ್ಷಕರು, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ: ಪ್ರಕರಣ ದಾಖಲು- ಕಹಳೆ ನ್ಯೂಸ್

ಹಿರಿಯಡ್ಕ : ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಜೂ.24ರಂದು ನಡೆದಿದೆ. ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಅಲ್ಲದೆ ಅಧೀಕ್ಷಕರ...
ಉಡುಪಿಸುದ್ದಿ

ಜೂ.29ರ0ದು ದಿನೇಶ ಉಪ್ಪೂರ ವಿರಚಿತ “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಲೋಕಾರ್ಪಣೆ- ಕಹಳೆ ನ್ಯೂಸ್

ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29 ನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಪುಸ್ತಕವನ್ನು ಅನಾವರಣಗೊಳಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ....
ಉಡುಪಿಸುದ್ದಿ

ಉಡುಪಿ ನಗರಸಭೆಯ ಮಣಿಪಾಲ ಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಘಾಟಿಸಿ ಶುಭ ಹಾರೈಸಿದ ಶಾಸಕ ಯಶ್ ಪಾಲ್ ಸುವರ್ಣ- ಕಹಳೆ ನ್ಯೂಸ್

ಉಡುಪಿ ನಗರಸಭೆಯ ಮಣಿಪಾಲ ಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಅನಂತ ನಗರ, ದಶರಥ ನಗರ, ಮಣಿಪಾಲ ಜನನಿ ಹಾಗೂ ಈಶ್ವರ ನಗರ ರಿಕ್ಷಾ ನಿಲ್ದಾಣ ಮತ್ತು ನವೀಕರಣಗೊಂಡ ಮಣಿಪಾಲ ಕೆ. ಎಂ. ಸಿ. ರಿಕ್ಷಾ ನಿಲ್ದಾಣದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಣಿಪಾಲ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಶ್ರೀ ವಿಜಯ ಪುತ್ರನ್,...
1 61 62 63 64 65 120
Page 63 of 120