ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ- ಕಹಳೆ ನ್ಯೂಸ್
ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ. ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು. ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಕಚೇರಿಯಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ಹಮ್ಮಿಕೊಂಡಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಈ ಅವಧಿಯಲ್ಲಿ...







