ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ – ಕಹಳೆ ನ್ಯೂಸ್
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಹವಾಲು ಸ್ವೀಕರಿಸಿ ಮಾತನಾಡಿದ ಯಶ್ ಪಾಲ್ ಸುವರ್ಣ ಶಾಸಕರಾದ ಬಳಿಕ ಪ್ರಥಮ ಬಾರಿಗೆ ಕಡೆಕರ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಗಳಿಗೂ ಭೇಟಿ ನೀಡಲಿದ್ದು ಗ್ರಾಮದ ಎಲ್ಲಾ ಸಮಸ್ಯೆ, ಬೇಡಿಕೆಗಳ ಬಗ್ಗೆ ಸದಾ ಸ್ಪಂದಿಸುವ ಆಶಯ ವ್ಯಕ್ತಪಡಿಸಿದರು. ಮುಂದಿನ ಬಾರಿ...







