ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ : ಜನತೆ ಶಾಂತಿ ಕಾಪಾಡುವಂತೆ ಪೇಜಾವರ ಶ್ರೀ ಮನವಿ – ಕಹಳೆ ನ್ಯೂಸ್
ಉಡುಪಿ : ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿμÁದವಾಗಿದೆ ಎಂದು ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ...







