ಮಲ್ಪೆ ಬೀಚ್ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್‌ಗಳಲ್ಲಿ ಪ್ರವಾಸೋದ್ಯಮಕ್ಕೆ ಅತಿವೃಷ್ಟಿ ಹೊಡೆತ -ಕಹಳೆ ನ್ಯೂಸ್
ಉಡುಪಿ: ಜಿಲ್ಲೆಯಲ್ಲಿ ಬೀಚ್ ಮತ್ತು ದೇಗುಲ ಪ್ರವಾಸೋದ್ಯಮವು ಪ್ರಮುಖವಾಗಿದ್ದು, ಈ ವರ್ಷ ಅಕ್ಟೋಬರ್ ತಿಂಗಳವರೆಗೂ ನಿರಂತರವಾಗಿ ಸುರಿದ ಮಳೆಯು ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಬೀಚ್‌ಗಳಲ್ಲಿ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ತಡೆಬೇಲಿ ಹಾಕಲಾಗುತ್ತದೆ. ಮಲ್ಪೆ ಬೀಚ್ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್‌ಗಳಲ್ಲೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಾರಿ ಮಳೆ ನಿರಂತರವಾಗಿ ಸುರಿದ ಕಾರಣ ಹಾಗೂ ಕಡಲು ಪ್ರಕ್ಷುಬ್ಧವಾಗಿದ್ದ ಕಾರಣ ಬೀಚ್‌ಗಳಿಗೆ ಅಳವಡಿಸಿದ್ದ ತಡೆಬೇಲಿಗಳನ್ನು...







