ಶ್ರೀ ಕೃಷ್ಣಮಠದ ರಾಜಾಂಗಣಕ್ಕೆ ಹೊಂದಿಕೊoಡಿರುವ ನವೀಕೃತ ಶ್ರೀಕೃಷ್ಣ ಛತ್ರದ ಕೃಷ್ಣಾರ್ಪಣ ಕಾರ್ಯಕ್ರಮ – ಕಹಳೆ ನ್ಯೂಸ್
ಉಡುಪಿ : ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಚತುರ್ಥ ಶ್ರೀ ಕೃಷ್ಣ ಪೂಜಾ ಪರ್ಯಾಯ ಅವಧಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಭಕ್ತರ ನೆರವಿನೊಂದಿಗೆ ಶ್ರೀ ಕೃಷ್ಣಮಠದ ರಾಜಾಂಗಣಕ್ಕೆ ಹೊಂದಿಕೊAಡು ಇರುವ ನವೀಕೃತ ಶ್ರೀ ಕೃಷ್ಣ ಛತ್ರವನ್ನು ಇತರೆ ಮಠಾಧೀಶರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣನಿಗೆ ಸಮರ್ಪಿಸಿದರು. ಸದ್ರಿ ಛತ್ರವು 1966 ರಲ್ಲಿ ಆಗಿನ ಶ್ರೀಶೀರೂರು ಮಠಾಧೀಶರಿಂದ ನಿರ್ಮಸಲ್ಪಟ್ಟು ಪ್ರಸ್ತುತ ಶಿಥಿಲಗೊಂಡಿತ್ತು . ಇದೀಗ ಸಮಾರು 3.5...







