ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಎ. ಸುವರ್ಣ ನಾಮಪತ್ರ ಸಲ್ಲಿಕೆ, ಬೃಹತ್ ಪಾದಯಾತ್ರೆ ; ಶಾಸಕ ಕೆ. ರಘುಪತಿ ಭಟ್ ಸಾಥ್ – ಕಹಳೆ ನ್ಯೂಸ್
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಎ. ಸುವರ್ಣ ಅವರು ಗುರುವಾರ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಶ್ರೀ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ, ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಿರಿಯ ಮುಖಂಡ ಸೋಮಶೇಖರ ಭಟ್ ಮನೆಗೆ ತೆರಳಿ ಆಶೀರ್ವಾದ ಪಡೆದು ಬಿಜೆಪಿ...







