ದಕ್ಷಿಣ ಕನ್ನಡದಲ್ಲಿ ಎನ್‍ಐಎ ಅಧಿಕಾರಿಗಳ ಶೋಧ ಕಾರ್ಯ : ಮೂವರನ್ನು ವಶಪಡಿಸಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು – ಕಹಳೆ ನ್ಯೂಸ್
ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‍ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ...

