ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ : ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ -ಕಹಳೆ ನ್ಯೂಸ್
ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ...






