Tuesday, June 9, 2026

ಬೆಳಗಾವಿ

ಬೆಳಗಾವಿಸುದ್ದಿ

ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ಬೆಳಗಾವಿ: ಬೆಳಗಾವಿಯ ಉಪನೊಂದಣಿ ಇಲಾಖೆಯ ಪ್ರಭಾರಿ ಉಪನೊಂದಣಾಧಿಕಾರಿ ಸಚಿನ್ ಮಂಡೇದ ಹಾಗೂ ರಾಯಬಾಗ ತಾಲೂಕಿನ ನಿಲಜಿಯ ಪಶುವೈದ್ಯಕೀಯ ಇಲಾಖೆಯ ಪರಿವೀಕ್ಷಕ ಸಂಜಯ ದುರ್ಗಷ್ಣವರ ಅವರ ಮನೆಯ ಮೇಲೆ ಶುಕ್ರವಾರ(ಜ.31) ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....
ಬೆಳಗಾವಿಸಂತಾಪಸುದ್ದಿ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ -ಕಹಳೆ ನ್ಯೂಸ್

ಬೆಳಗಾವಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ ಬರಲಿದೆ. ನಾಲ್ವರ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಮಹಾಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ದಿನ ಪುಣ್ಯಸ್ನಾನ ಮಾಡಲು ಹೋಗಿದ್ದಾಗ ನೂಕುನುಗ್ಗಲು ಉಂಟಾಗಿ ನಿನ್ನೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 30 ಭಕ್ತರು ಸಾವನ್ನಪ್ಪಿದ್ದರು ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ ನಾಲ್ವರು ಕರ್ನಾಟಕದವರೂ ಸೇರಿದ್ದಾರೆ. 44 ವರ್ಷದ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ...
ಬೆಳಗಾವಿಸುದ್ದಿ

ಆಸ್ಪತ್ರೆಯಿಂದ  ಡಿಸ್ಚಾರ್ಜ್‌ ಆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ....
ಬೆಳಗಾವಿಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೇಟಿಯಾಗಿ ಆರೋಗ್ಯ ವಿಚಾರಿಸಿದ ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ – ಕಹಳೆ ನ್ಯೂಸ್

ಬೆಳಗಾವಿ: ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅರೋಗ್ಯ ವಿಚಾರಿಸಿದರು....
ಬೆಳಗಾವಿರಾಜ್ಯಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಸಚಿವೆ ಹಾಗೂ ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ – ಕಹಳೆ ನ್ಯೂಸ್

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿAದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ...
ಕ್ರೈಮ್ಬೆಳಗಾವಿರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು....
ಬೆಳಗಾವಿರಾಜಕೀಯರಾಜ್ಯಸುದ್ದಿ

ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್

ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024...
ಬೆಳಗಾವಿಸಂತಾಪಸುದ್ದಿ

ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮಿಗಳು ಹೃದಯಾಘಾತದಿಂದ ಲಿಂಗೈಕ್ಯ – ಕಹಳೆ ನ್ಯೂಸ್

ಬಾಗಲಕೋಟೆ: ಜಮಖಂಡಿ ತಾಲೂಕಿನ ಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಸ್ವಾಮೀಜಿಗಳು ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಕಳೆದ ಎರಡು ವರ್ಷದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ 9:30 ಕ್ಕೆ ಜೀವ ತ್ಯಜಿಸಿದ್ದಾರೆ. ಸವದತ್ತಿಯ ಗೊರವಿನಕೊಳ್ಳದ ಓಲೆ‌ಮಠದ ಶಾಖಾಮಠದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 9:30 ರ ನಂತರ ಗೊರವಿನಕೊಳ್ಳ ಸವದತ್ತಿಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ನಂತರ ಬೆಳಗ್ಗೆ 11 ಕ್ಕೆ ಜಮಖಂಡಿಗೆ ಸಾಗಿಸಲಾಗುವುದು. ಓಲೆಮಠದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ...
1 4 5 6 7
Page 6 of 7