ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್
ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...






