Sunday, September 6, 2026

ಶಿಕ್ಷಣ

ಉಡುಪಿಉದ್ಯೋಗಕಾಸರಗೋಡುದಕ್ಷಿಣ ಕನ್ನಡಶಿಕ್ಷಣಸುದ್ದಿ

ALVA’S PRAGATI 2026 | ಆ. 7, 8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ; ಉಡುಪಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು...
ಕ್ರೈಮ್ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಶಿಕ್ಷಕರಿಂದ ಕಿರುಕುಳ ಆರೋಪ : ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!- ಕಹಳೆ ನ್ಯೂಸ್

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ಕ್ರೂರ...
ದಕ್ಷಿಣ ಕನ್ನಡಪುತ್ತೂರುರಾಜ್ಯಶಿಕ್ಷಣಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ: ಪ್ರತೀ ಗ್ರಾಮಕ್ಕೊಂದು ಕೆಪಿಎಸ್ ಶಾಲೆ ಮಂಜೂರು ಮಾಡಿ: ಶಾಸಕ ಅಶೋಕ್ ರೈ ಮನವಿ -ಕಹಳೆ ನ್ಯೂಸ್

ಪುತ್ತೂರು: ಗ್ರಾಮಾಂತರ ಪ್ರದೇಶದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ತನ್ನ ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಕ್ಕೊಂದರಂತೆ ಕೆಪಿಎಸ್ ಶಾಲೆಯನ್ನು ಮಂಜೂರುಗೊಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್ ರವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಇಲಾಖಾ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈ ಮನವಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಬಡ ಮಕ್ಕಳು ಗುಣ ಮಟ್ಟದ ಶಿಕ್ಷಣದಿಂದ...
ಕಾಪುಶಿಕ್ಷಣ

ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಕಟಪಾಡಿ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚ್ಚಡ ದಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ ವಿದ್ಯೆ, ಬುದ್ಧಿ, ಸಂಸ್ಕಾರ ಹಾಗೂ ಆಟ-ಪಾಠಗಳ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಪವಿತ್ರ ಕಾರ್ಯವನ್ನು ಶಾಲೆಗಳು ಮತ್ತು ಶಿಕ್ಷಕರು ಮಾಡುತ್ತಾರೆ. ಶಿಕ್ಷಕರು ಜವಾಬ್ದಾರಿಯಿಂದ ಸೇವೆ ಸಲ್ಲಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡಬೇಕು. ಶಾಲೆಗಳು...
ಉಡುಪಿಕಾಪುರಾಜ್ಯಶಿಕ್ಷಣ

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ -ಕಹಳೆ ನ್ಯೂಸ್

ಪಾಂಗಳ: "ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ," ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪಾಂಗಳ ವಿದ್ಯಾವರ್ಧಕ ಶಾಲೆಗಳು ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿ ಪಾಂಗಳ ಆರ್ಯಡಿ ಗೋವಿಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಆರೋಗ್ಯಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಶಿಕ್ಷಣಸುದ್ದಿ

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಇಚ್ಛಾಶಕ್ತಿಯ ಫಲವಾಗಿ ಯೋಗ ವಿಶ್ವವ್ಯಾಪಿಯಾಗಿದೆ. ಜಗತ್ತನ್ನು ಯೋಗ ಆವರಿಸಿದೆ ಎಂದರೂ ಅತಿಶಯವಿಲ್ಲ. ಯೋಗ ಕೇವಲ ದೈಹಿಕ ಶಕ್ತಿಗಷ್ಟೇ ಅಲ್ಲ, ಮಾನಸಿಕ ಶಕ್ತಿಗೂ ಅತಿಮುಖ್ಯ. ಹಿಂದೂ ಪರಂಪರೆಯ ಶ್ರೇಷ್ಠತೆಯ ಭಾಗವಾಗಿರುವ ಯೋಗವನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳೋಣ. ಅನ್ನುವ ಧ್ಯೇಯ ದೊಂದಿಗೆ ಬಿಜೆಪಿ ಯುವಮೋರ್ಚಾ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಜೂ 21 ರಂದು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ರೈತ ಸಭಾಭವನದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆಯು   ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ನಡೆಯಿತು. 2026-27 ನೇ ಸಾಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯದ ಮೊದಲ ಘಟಕ ಇದಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರಸಾದ್ ಶಾನಭಾಗ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ನರೇಂದ್ರ ಪದವಿಪೂರ್ವ ಕಾಲೇಜು ಇವರು ವಹಿಸಿದ್ದರು. ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆ  ಫಲಿತಾಂಶ :  ಅಂಬಿಕಾ  ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಭರಪೂರ ಪದಕಗಳು – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 567 ವಿದ್ಯಾರ್ಥಿಗಳು  2025-26ನೇ ಸಾಲಿನ ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆಗೆ ಬರೆದಿದ್ದು,  ಅದರಲ್ಲಿ 82 ಮಂದಿ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ  ಪತ್ರ, 66 ವಿದ್ಯಾರ್ಥಿಗಳು ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ, 52 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿವನ್ನು ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಸಂಬಂಧಿಸಿದಂತೆ  ಗಣಿತ ವಿಷಯದಲ್ಲಿ 2ನೇ  ತರಗತಿಯ ವಾತ್ಸಲ್ಯ ಹಾಗೂ...
1 2 3 82
Page 1 of 82