ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಮಾದರಿ ನಡೆ ; ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡುವ ಮೂಲಕ ಅರ್ಥಪೂರ್ಣ ವಿಜಯೋತ್ಸವ -ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ ಈ ಬಾರಿಯ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಮಾದರಿ ಕಾರ್ಯವೊಂದನ್ನು ನಡೆಸಿ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ಅಂಬಿಕಾ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿವೆ. ಭಾರತೀಯ ಸೇನೆ, ಯೋಧರ ಸಾಹಸಗಾಥೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುತ್ತಿವೆ. ಇದರಿಂದ ಪ್ರೇರೇಪಣೆಗೊಂಡ ವಿದ್ಯಾರ್ಥಿ ಸಂಘ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳ ಸ್ವಯಂಪ್ರೇರಿತ ಧನಸಹಾಯವನ್ನು ಪಡೆದು...







