Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ವಿದ್ಯಾರ್ಥಿಗಳಿಗೆ “ಪಿಯುಸಿ ಪರೀಕ್ಷಾ ಒಳನೋಟ” ಶೀರ್ಷಿಕೆಯಡಿ ಮೊದಲ ಉಪನ್ಯಾಸ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್‌, ದೇವಿಪ್ರಸಾದ್‌ಹಾಗೂ ಉಷಾ ಎ ಎಂ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಬದಲಾದ ಪ್ರಶ್ನೆಪತ್ರಿಕೆಯ ಮಾದರಿ ಹಾಗೂ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ ; ನಮ್ಮ ಸರ್ವಸೇವೆಯೂ ಈ ದೇಶಕ್ಕಾಗಿ ಸಮರ್ಪಿತವಾಗಬೇಕು : ಸುಬ್ರಮಣ್ಯ ನಟ್ಟೋಜ

ಪುತ್ತೂರು: ವೈದ್ಯರಾಗಬೇಕೆನ್ನುವ ಕನಸು ಹಲವು ವಿದ್ಯಾರ್ಥಿಗಳಲ್ಲಿದೆ. ಆದರೆ ಅಂತಹ ಗುರಿ ಈಡೇರಿದ ನಂತರ ನಮ್ಮ ಸೇವೆ ಈ ದೇಶಕ್ಕಾಗಿಯೇ ಇರಬೇಕು. ನಮ್ಮ  ರಾಷ್ಟ್ರ ನಮ್ಮ ಮೊದಲ ಹಾಗೂ ಏಕೈಕ ಆದ್ಯತೆಯಾಗಬೇಕು. ವೈದ್ಯಕೀಯ ಸೇವೆಯನ್ನು ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ತಲಪುವಂತೆ ಮಾಡುವುದರಲ್ಲಿ ನಿಜವಾದ ಸಾರ್ಥಕ್ಯ ಅಡಗಿದೆ ಎಂದು ಅAಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾಧಕ ಹಿರಿಯ ವಿದ್ಯಾರ್ಥಿನಿಗೆ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರಮಟ್ಟದ ಪರೀಕ್ಷೆಯಾದ Joint Admission Test For Masters(JAM) ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ 147ನೇ ರಾಂಕ್ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ. ಈ ಮೂಲಕ ಬೆಂಗಳೂರಿನಲ್ಲಿರುವ ಭಾರತದ ಶ್ರೇಷ್ಠ ಸಂಶೋಧನಾ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾದ ಐಐಎಸ್ಸಿ ಯಲ್ಲಿ ಎಂ.ಎಸ್ಸಿ, ಪಿ.ಎಚ್.ಡಿ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ವತಿಯಿಂದ ಪ್ರಾಂಶುಪಾಲರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ಸ್ಮಾರ್ಟ್ ; ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಅತ್ಯುತ್ಕೃಷ್ಟ ಶಿಕ್ಷಣ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣದಲ್ಲಿ ಆಧುನಿಕತೆ ಇಂದಿನ ಅಗತ್ಯ. ಈಅನಿವಾರ್ಯತೆಯನ್ನು ಮನಗಂಡ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ತಾನು ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಕಾಯಕಕ್ಕೆ ಪೂರಕವಾಗುವ ಹತ್ತು ಹಲವು ವಿನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಂತಹದ್ದರಲ್ಲಿ ಒಂದಾದ ಸ್ಮಾರ್ಟ್ ಬೋರ್ಡ್ ಇದೀಗ ವಿದ್ಯಾರ್ಥಿಗಳ ಕಲಿಕೆಗೆ ನೆಚ್ಚಿನ ಪೂರಕ ಸಂಗತಿಯಾಗಿ ಪರಿಣಮಿಸಿದೆ. ಈ ಸ್ಮಾರ್ಟ್ ಬೋರ್ಡ್ ತರಗತಿಗೆ ಬಂದ ನಂತರ ವಿದ್ಯಾರ್ಥಿಗಳ ಕಲಿಕಾ ಸಾಧ್ಯತೆ ಮತ್ತಷ್ಟು ವಿಸ್ತರಿಸಿಕೊಂಡಿದೆ. ಈ ಬೋರ್ಡ್ನಲ್ಲಿ ಪ್ರತಿಯೊಂದನ್ನೂ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ನರೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ – ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 1,50,000 ದ ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ ಚಂದಳಿಕೆ ಶಾಲೆಯಲ್ಲಿ ದಿವಂಗತ ವಿಠಲ ಶೆಟ್ಟಿಯವರಿಗೆ ನುಡಿ ನಮನ – ಕಹಳೆ ನ್ಯೂಸ್

ಬಂಟ್ವಾಳ : ಇತ್ತೀಚೆಗೆ ನಿಧರಾದ ವಿಟ್ಲದ ಜನಪ್ರಿಯ ಮುಖ್ಯೋಪಾಧ್ಯಾಯ ವಿಠಲ ಶೆಟ್ಟಿಯವರಿಗೆ ನುಡಿ ನಮನವನ್ನು ಚಂದಳಿಕೆ ಶಾಲೆಯಲ್ಲಿ ಜರಗಿಸಲಾಯಿತು. ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ, ಎಸ್.ಡಿ.ಎಂ.ಸಿ ಚಂದಳಿಕೆ ಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಕಲಾಲೋಕ ಬಂಟ್ವಾಳ ತಾಲೂಕು ಘಟಕ ಇವರು ಜಂಟಿಯಾಗಿ ಈ ಕಾರ್ಯಕ್ರಮವನ್ನು ಸಂಘಟಿಸಿದ್ದರು. ದಿವಂಗತರ ಬಗ್ಗೆ ಮಾತನಾಡಿದ ಮಕ್ಕಳ ಕಲಾ ಲೋಕದ ಗೌರವ ಸಲಹೆಗಾರ ಭಾಸ್ಕರ ಅಡ್ವಳರು ವಿಠಲ ಶೆಟ್ಟರು ಸಾತ್ವಿಕ ಜೀವನ ನಡೆಸಿದ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ರಕ್ಷಕ – ಶಿಕ್ಷಕ ಸಂಘದ ಸಭೆ ; ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆಗೂ ಗಮನ ಕೊಡಬೇಕು : ಲಕ್ಷ್ಮೀಕಾಂತ ಆಚಾರ್ಯ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಉಪನ್ಯಾಸಕರು ಹೇಳಿದ್ದನ್ನು ಅರ್ಥಮಾಡಿಕೊಂಡು, ನಂಬಿಕೆ ಇಟ್ಟು ಅನುಸರಿಸಬೇಕು. ಅದರಲ್ಲೂ ಪರೀಕ್ಷಾ ಸಿದ್ಧತೆಯನ್ನು ಸಾಕಷ್ಟು ಮುಂಚಿತವಾಗಿ ಮಾಡಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ  ಆಚಾರ್ಯ ಹೇಳಿದರು. ಅವರು ಕಾಲೇಜಿನಲ್ಲಿ ಆಯೋಜಿಸಲಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಭಾಗವಹಿಸಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಕಡೆಗಷ್ಟೇ ಅಲ್ಲದೆ ಆರೋಗ್ಯದ ಕಡೆಗೂ ಗಮನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ, ಆದರೆ ವ್ಯವಹಾರದ ಯಶಸ್ಸು  ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದು ಪುತ್ತೂರಿನ ಉದ್ಯಮಿಗಳಾದ ಮತ್ತು ಮರಿಕೆ ಹೋಂ ಇಂಡಸ್ಟ್ರಿ ಇದರ ಮಾಲಕರಾದ ಸುಹಾಸ್ ಮರಿಕೆ ...
1 17 18 19 20 21 80
Page 19 of 80