Sunday, September 6, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜೂ.13ರಂದು ಕಾರ್ಗಿಲ್ ಹುಲಿ, ಸೇನಾ ಪದಕ ವಿಜೇತ ಕ್ಯಾ. ನವೀನ್ ನಾಗಪ್ಪ ಅಂಬಿಕಾಕ್ಕೆ ಭೇಟಿ -ಹಳೆ ನ್ಯೂಸ್

ಪುತ್ತೂರು: ಕಾರ್ಗಿಲ್ ಹೋರಾಟದಲ್ಲಿ ಅಪ್ರತಿಮ ಶೌರ್ಯಪ್ರದರ್ಶಿಸಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ತನ್ನದಾದ ಕೊಡುಗೆ ನೀಡಿರುವ, ಸೇನಾ ಪದಕ ವಿಜೇತ ಕ್ಯಾಪ್ಟನ್ ನವೀನ್ ನಾಗಪ್ಪ ಜೂನ್13 ರಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿ ಸಂಘದ ಪದಗ್ರಹಣವನ್ನು ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿ ಜೂನ್ 8 ಸೋಮವಾರದಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ಪ್ರತಿನಿಧಿ ಹೇಮಂತ್ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಛಲ, ದೃಢಸಂಕಲ್ಪ, ಶಿಸ್ತು, ಸಂಯಮ , ಮತ್ತು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಸೀತಾರಾಮ ಎಂ.ಡಿ. ಅವರಿಗೆ ಕ್ಯಾಪ್ಟನ್ ಹುದ್ದೆಗೆ ಬಡ್ತಿ – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ. ಅವರು ಕ್ಯಾಪ್ಟನ್ ಹುದ್ದೆಗೆ ಬಡ್ತಿ ಹೊಂದಿದ್ದು, ಈ ಸಂಬಂಧದ ಪಿಪ್ಪಿಂಗ್ ಸಮಾರಂಭವು ಜೂನ್ 5, 2026ರಂದು ಮಡಿಕೇರಿಯ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕೇಂದ್ರದಲ್ಲಿ ಗೌರವಯುತವಾಗಿ ನಡೆಯಿತು. ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ನೆಹರು ಸ್ಮಾರಕ ಕಾಲೇಜಿನಲ್ಲಿ ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಎಂ.ಡಿ. ಅವರು ತಮ್ಮ ಕರ್ತವ್ಯನಿಷ್ಠೆ, ಶಿಸ್ತುಬದ್ಧತೆ, ನಾಯಕತ್ವ ಗುಣಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ 2026-27 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: "ಶಿಕ್ಷಣದಿಂದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು, ಸತ್ಪ್ರಜೆಗಳಾಗಬೇಕು. ಶೈಕ್ಷಣಿಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಅತ್ಯುತ್ತಮ ಸಾಧಕಾ ರಗಬೇಕೆಂದು"ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೂನ್ ಒಂದರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲೆಗೊಂಡ ಹಾಗೂ ಇತರ ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ...
ದೆಹಲಿಶಿಕ್ಷಣಸುದ್ದಿ

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ-ಕಹಳೆ ನ್ಯೂಸ್

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್‌ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...
ಮುಂಬೈಶಿಕ್ಷಣಸುದ್ದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಆರ್‌ಸಿಸಿ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್-ಕಹಳೆ ನ್ಯೂಸ್

ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ  ಲಾತೂರ್‌ನಲ್ಲಿ  ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸಿಬಿಐ ಶೋಧ ನಡೆಸಿದ ಸಮಯದಲ್ಲಿ ಮೋಟೆಂಗಾಂವ್ಕರ್ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಪತ್ತೆಯಾಗಿದೆ. ಬಳಿಕ ಶಿವರಾಜ್‌ನನ್ನು ಬಂಧಿಸಲಾಗಿದೆ. ನೀಟ್ ಯುಜಿ ಪತ್ರಿಕೆ ಸೋರಿಕೆ ಮತ್ತು ಪ್ರಸರಣದಲ್ಲಿ ಭಾಗಿಯಾಗಿರುವ ಸಂಘಟಿತ ಗ್ಯಾಂಗ್‌ನ ಸಕ್ರಿಯ ಸದಸ್ಯ ಮೋಟೆಗಾಂವ್ಕರ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ – ಕಹಳೆ ನ್ಯೂಸ್

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದಿರುತ್ತಾರೆ. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬೊಂಡಾಲದಲ್ಲಿ ಪಡೆದು...
1 2 3 4 82
Page 2 of 82