ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮ -ಕಹಳೆ ನ್ಯೂಸ್
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಸಹಯೋಗದೊಂದಿಗೆ ನಡೆದ 21 ದಿನಗಳ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಜಿಲ್ಲಾ ಸಂಘಟನಾ ಪ್ರಮುಖರಾದ ಹರಿಪ್ರಸಾದ್ ಇವರು ಭಾಗವಹಿಸಿ ಯೋಗ...







