ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ -2025 : ಶಿಬಿರಾರ್ಥಿಗಳಿಂದ ರಾಮಕೃಷ್ಣ ಮಿಷನ್ ಸಂಸ್ಥೆಗೆ ಭೇಟಿ-ಕಹಳೆ ನ್ಯೂಸ್
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಯುರೇಕಾ - 2025 , ನಾಲ್ಕನೇ ದಿನದ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಕ್ಷೇತ್ರ ಭೇಟಿಯನ್ನು ಏರ್ಪಡಿಸಲಾಯಿತು.ಮಂಗಳೂರಿನ ರಾಮಕೃಷ್ಣ ಮಿಷನ್ ಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಅಲ್ಲಿ ವಿದ್ಯಾರ್ಥಿಗಳಿಗೆ ರಾಮಕೃಷ್ಣ ಮಿಷನ್ ನ ಅಧ್ಯಕ್ಷರು ಸ್ವಾಮಿ ಜಿತಕಾಮಾನಂದಜಿ ಅವರು ಆಶ್ರಮದ ಮತ್ತು ಸುತ್ತಮುತ್ತಲಿನ ಪರಿಸರದ ಪರಿಚಯವನ್ನು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮಿಯಾವಾಕಿ ನಗರಾರಣ್ಯವನ್ನು ಸಂದರ್ಶಿಸಲಾಯಿತು. ಬಳಿಕ ರಾಮಕೃಷ್ಣ ಆಶ್ರಮದ ಪರಿಸರದಲ್ಲಿ ವಿದ್ಯಾರ್ಥಿಗಳಿಗಾಗಿ ಖ್ಯಾತ...







