ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್
ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ,...







