ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಸ್ಕೌಟ್ಸ್ ಗೈಡ್ಸ್ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವ ಸ್ಕೌಟ್ಸ್ ಗೈಡ್ಸ್, ರೋರ್ಸ್ ಮತ್ತು ರೇಂಜರ್ಸ್ ಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಕೌಟ್ಸ್ ಗೈಡ್ಸ್ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದ್ದು ಮಕ್ಕಳಲ್ಲಿ ಬೌದ್ಧಿಕ...







