ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಜೂ.7ರಿಂದ 9ರವರೆಗೆ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ –ಕಹಳೆ ನ್ಯೂಸ್
ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಕಾನೂನು ಕಾಲೇಜುಗಳ 18 ತಂಡಗಳು ಭಾಗವಹಿಸಲಿವೆ. ಜೂನ್ 7ರಂದು ಸಂಜೆ 5 ಗಂಟೆಗೆ ಕರ್ನಾಟಕ...







