ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ ಎ ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಧಿತ್ವ-2023 ಕಾರ್ಯಕ್ರಮ -ಕಹಳೆ ನ್ಯೂಸ್
ಪುತ್ತೂರು : "ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ" ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ...







