ಕಲ್ಲಡ್ಕ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿಗೆ ಶೇ 95% ಫಲಿತಾಂಶ –ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಹಾಜರಾದ 301 ವಿದ್ಯಾರ್ಥಿಗಳಲ್ಲಿ 284 ವಿದ್ಯಾರ್ಥಿಗಳು ತೇರ್ಗಡೆಯಾಗಿ ಒಟ್ಟು ಶೇ 95 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 31 ರಲ್ಲಿ 30, ವಾಣಿಜ್ಯ ವಿಭಾಗದಲ್ಲಿ 171 ರಲ್ಲಿ 166, ವಿಜ್ಞಾನ ವಿಭಾಗದಲ್ಲಿ 99 ರಲ್ಲಿ 88 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ 83, ಪ್ರಥಮ ಶ್ರೇಣಿಯಲ್ಲಿ 161 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಾಧನೆಗೈದಿದ್ದಾರೆ. ಗ್ರಾಮಾಂತರ ಪ್ರದೇಶದ...







