ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್
ಬಂಟ್ವಾಳ, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ. ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್ ಶಾಲೆಯಲ್ಲಿ...







