ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ : 32 ಜನರಲ್ಲಿ ಸೋಂಕು ದೃಢ- ಕಹಳೆ ನ್ಯೂಸ್
ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ:...







