ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ -ಕಹಳೆ ನ್ಯೂಸ್
ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...







