ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ – ಕಹಳೆ ನ್ಯೂಸ್
ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪ ಕೇಂದ್ರ ವಿರಕಂಬ, ಗ್ರಾಮ ಪಂಚಾಯತ್ ವಿರಕಂಬ ಇದರ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷರಾದ ಮೀನಾಕ್ಷಿ ರವರ ಅಧ್ಯಕ್ಷತೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈಗಾಗಲೇ ಮಳೆಗಾಲ ಆರಂಭವಾದ ಕಾರಣ ಗ್ರಾಮ ವ್ಯಾಪ್ತಿಯಲ್ಲಿ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳನ್ನು ಬರದ ಹಾಗೆ ತಡೆಗಟ್ಟುವ...







