Thursday, May 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

ಒಂದು ತಿಂಗಳಲ್ಲಿ ದಕ್ಷಿಣ ಕನ್ನಡ ಡ್ರಗ್ಸ್ ಮುಕ್ತ ಜಿಲ್ಲೆ | ಪಬ್, ಕ್ಲಬ್ ಎಲ್ಲವೂ ಬಂದ್ ಆಗಬೇಕು ; ಸಂಸದ ನಳಿನ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಸೆ. 17 : ರಾಜ್ಯದಲ್ಲಿ ಡ್ರಗ್ಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ದ.ಕ. ಜಿಲ್ಲೆಯನ್ನು ಒಂದು ತಿಂಗಳಿನಲ್ಲಿ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಮಾತನಾಡಿರುವ ಅವರು, ನಮ್ಮ ಜಿಲ್ಲೆಯಲ್ಲಿರುವ ಪಬ್‌ಗಳು ಮುಚ್ಚಬೇಕು. ಪಬ್, ಕ್ಲಬ್ ಎಲ್ಲವನ್ನೂ ಬಂದ್ ಮಾಡಿ ಆದೇಶ ನೀಡಬೇಕು. ಈ ಹಿಂದೆ ನಮ್ಮ ಕಾಲಘಟ್ಟದಲ್ಲಿ ವೀಡಿಯೋ ಗೇಮ್ ಕ್ಲಬ್ ನಿಲ್ಲಿಸಿದ್ದೇವೆ. ಸದ್ಯ...
ರಾಜಕೀಯರಾಜ್ಯ

ಇಂದು ಸಂಜೆ ಸಿಎಂ ಮಹತ್ವದ ಸಭೆ, ಕಡ್ಡಾಯವಾಗಿ ಎಲ್ಲಾ ಸಚಿವರು ಹಾಜರಾಗುವಂತೆ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು,ಸೆ.7-ಎಡೆಬಿಡದೆ ಕಾಡುತ್ತಿರುವ ಕೊರೊನಾ ಅಟ್ಟಹಾಸ, ಡಿಜೆಹಳ್ಳಿ ಗಲಭೆ, ಡ್ರಗ್ಸ್ ರಂಪಾಟದ ನಡುವೆ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸಂಜೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಕರೆದಿರುವ ಸಭೆಗೆ ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಕೋವಿಡ್ ನಿಯಂತ್ರಣ, ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ, ಮುಂದೆ ನಡೆಯಲಿರುವ ವಿಧಾನಸಭಾ ಅಧಿವೇಶನ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಯಡಿಯೂರಪ್ಪ ಚರ್ಚೆ ನಡೆಸುವ ಸಾಧ್ಯತೆ ಇದೆ. ಸೆ. 21ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ...
ರಾಜಕೀಯರಾಜ್ಯ

ಗ್ರಾ.ಪಂ ಚುನಾವಣೆಗೆ ಆಯೋಗ ಸಿದ್ಧತೆ ಗುಂಪು ಪ್ರಚಾರ, ವಿಜಯೋತ್ಸವ ಮಾಡಲು ಅನುಮತಿ ಇಲ್ಲ! – ಕಹಳೆ ನ್ಯೂಸ್

ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಗೆದ್ದ ಮೇಲೆ ವಿಜಯೋತ್ಸವ ಆಚರಣೆ ಇಲ್ಲ. ಇಂತಹ ನಿಯಮದೊಂದಿಗೆ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣ ಆಯೋಗ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯನಿರ್ವಹಣ ವಿಧಾನ (ಎಸ್‍ಒಪಿ)ಯ ಕರಡು ಮಾರ್ಗಸೂಚಿಗಳಾಗಿವೆ. ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್...
ರಾಜಕೀಯ

ನೂತನ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ – ಕಹಳೆ ನ್ಯೂಸ್

ನವದೆಹಲಿ: ಮಾಜಿ ರಾಜತಾಂತ್ರಿಕ ಅಧಿಕಾರಿ ರಾಜೀವ್ ಕುಮಾರ್ ಅವರು ನೂತನ ಚುನಾವಣಾ ಆಯುಕ್ತರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಏಷ್ಯನ್ ಡೆವಲಪ್​ಮೆಂಟ್ ಬ್ಯಾಂಕಿನ ವೈಸ್​ ಪ್ರೆಸಿಡೆಂಟ್ ಆಗಿ ತೆರಳಿದ ಅಶೋಕ್ ಲಾವಾಸ ಅವರಿಂದ ತೆರವಾಗಿದ್ದ ಸ್ಥಾನವನ್ನು ರಾಜೀವ್ ತುಂಬಿದ್ದಾರೆ. ರಾಜೀವ್ ಅವರು ಜಾರ್ಖಂಡ್ ಕೆಡರ್​ನ 1984ರ ಬ್ಯಾಚಿನ ಐಎಎಸ್ ಅಧಿಕಾರಿ. 2024ರ ಚುನಾವಣೆ ಸಂದರ್ಭದಲ್ಲಿ ಅವರೇ ಮುಖ್ಯ ಚುನಾವಣಾಧಿಕಾರಿಯಾಗಬಹುದು. ನಿಯಮಾವಳಿ ಪ್ರಕಾರ, ಚುನಾವಣಾ ಆಯುಕ್ತರ ಅಧಿಕಾರಾವಧಿ ಆರು ವರ್ಷ ಅಥವಾ ಅವರ...
ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಕೆ : ನಳಿನ್ ಕುಮಾರ್ ಗೆ ಸಿಎಂ ಬಿಎಸ್ ವೈ ಅಭಿನಂದನೆ -ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟರ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಪೂರ್ತಿ ತುಂಬ, ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ...
ರಾಜಕೀಯರಾಜ್ಯ

ಯಡಿಯೂರಪ್ಪ ನಂತರ ರಾಜ್ಯ ಬಿಜೆಪಿ ನಾಯಕತ್ವ ಯಾರಿಗೆ? ನಳಿನ್ ಕುಮಾರ್ ಕಟೀಲ್ ಏನಾಂತರೆ!- ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಯಾರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮದು ವಿಭಿನ್ನ ಪಕ್ಷ, ನಮ್ಮ ನಾಯಕರು ಸುವ್ಯವಸ್ಥಿತವಾಗಿ ಬೆಳೆದಿರುತ್ತಾರೆ ಎಂದು ಸ್ಪಷ್ಟಪಡಿಸಿದ ನಳಿನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ನಾಯಕರು. ಮುಂದೆ ಯಾರು ನಾಯಕತ್ವ ವಹಿಸಬೇಕು ಎಂಬ ಸಂದರ್ಭ ಬಂದಾಗ ಪಕ್ಷ...
ರಾಜಕೀಯರಾಷ್ಟ್ರೀಯಸುದ್ದಿ

Breaking News : ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಸಿಂಗಂ ಖ್ಯಾತಿಯ ಅಣ್ಣಾಮಲೈ ; ಇಂದು ಜೆ.ಪಿ. ನಡ್ಡಾ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ, ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಗಂ ಅಣ್ಣಾಮಲೈ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದು, ಇಂದು ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2021 ರಲ್ಲಿ ಏಪ್ರಿಲ್ ನಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
1 103 104 105 106 107 232
Page 105 of 232