ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತಾಲೂಕು ಅಧ್ಯಕ್ಷ ಅಬ್ದುಲ್ ಕುಂಞಿ ಪಟ್ಟೆ ಅವರಿಗೆ ವಿದೇಶದಿಂದ ಕೊಲೆ ಬೆದರಿಕೆ – ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು – ಶಾಸಕ ಮಠಂದೂರು, ಬಿಜೆಪಿ ನಾಯಕರಿಂದ ಸೂಕ್ತ ತನಿಖೆಗೆ ಆಗ್ರಹ – ಕಹಳೆ ನ್ಯೂಸ್
ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪುತ್ತೂರು ತಾಲೂಕು ಅಧ್ಯಕ್ಷ ಅಬ್ದುಲ್ ಕುಂಞಿ ಪಟ್ಟೆ ಅವರಿಗೆ ವಿದೇಶದಿಂದ ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದು ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಕುಂಞಿಯವರು ದೂರು ನೀಡಿದ್ದು, ಇದನ್ನು ತಿಳಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಲು ಆದೇಶಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರು ನಗರ ಅಧ್ಯಕ್ಷ,ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್...







