Recent Posts

Saturday, May 9, 2026

ರಾಜಕೀಯ

ರಾಜಕೀಯ

ನೂರಕ್ಕೆ ನೂರು 15 ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ; ಸಿಎಂ ಯಡಿಯೂರಪ್ಪ ವಿಶ್ವಾಸ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ತಿಂಗಳ ಮೂರನೇ ತಾರೀಖಿನ ಒಳಗೆ ಮತ್ತೊಂದು ಬಾರಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗುತ್ತೇನೆ. ಶನಿವಾರದಿಂದ ಚುನಾವಣಾ ಪ್ರಚಾರ ಆರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಕ್ಷೇತ್ರಗಳಲ್ಲಿ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ತುಂಬಾ ಚೆನ್ನಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ನೂರಕ್ಕೆ ನೂರು 15 ಕ್ಷೇತ್ರಗಳಲ್ಲಿಯೂ ನಮ್ಮದೇ ಗೆಲುವು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ...
ರಾಜಕೀಯ

ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟು ಮತ್ತೆ ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟು ಮತ್ತೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಈ ಬೆಳವಣಿಗೆ ಎಲ್ಲರನ್ನು ಅಚ್ಚರಿಗೊಳಿಸಿದೆ. ಬಿಜೆಪಿ ಹಾಗೂ ಎನ್‍ಸಿಪಿ ಜೊತೆಗೂಡಿ ಸರ್ಕಾರ ರಚನೆ ಮಾಡಲಿದೆ. ಮುಖ್ಯಮಂತ್ರಿಯಾಗಿ ಮತ್ತೆ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರು ಪ್ರಮಾಣವಚಣ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ...
ರಾಜಕೀಯ

ಜಾಪ್ರಭುತ್ವವನ್ನು ಹಾಳುಮಾಡುವ ಅನರ್ಹ ಪಕ್ಷಾಂತರಿಗಳನ್ನು ಸೋಲಿಸಲು ವಾಟಾಳ್ ಕರೆ – ಕಹಳೆ ನ್ಯೂಸ್

ಮೈಸೂರು: ಪಕ್ಷಾಂತರಿಗಳನ್ನು ಈ ಬಾರಿಯ ಉಪಚುನಾವಣೆಯಲ್ಲಿ ಸೋಲಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಭಾನುವಾರ ವಿನೂತನ ಪ್ರತಿಭಟನೆ ನಡೆಸಿದರು . ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವ ಹಾಳಾಗಿದೆ. ಇದೊಂದು ರೀತಿಯಲ್ಲಿ ದರೋಡೆ. ಇವರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮರುಪರುಶೀಲನೆ ಅರ್ಜಿ ಹಾಕಬೇಕು. ಇಂತಹ ರಾಜಕಾರಣಿಗಳು ಸಂಸದೀಯ ವ್ಯವಸ್ಥೆಗೆ ಕಪ್ಪುಚುಕ್ಕೆ ಇದ್ದಂತೆ. ಇವರನ್ನು ಜನರು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು. ಈ ಉಪಚುನಾವಣೆಯಲ್ಲಿ ಪಕ್ಶ್ಂತರಿಗಳಿಗೆ...
ರಾಜಕೀಯ

ಬಿಎಸ್ವೈ ಸಿಎಂ ಆಗಲು ತ್ಯಾಗ ಮಾಡಿದವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ‘ ಶೋಭಾ’ -ಕಹಳೆ ನ್ಯೂಸ್

ಕೆಂಗೇರಿ:ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಿ ಅಧಿಕಾರ ತ್ಯಜಿಸಿ ಬಂದಿರುವ ಹದಿನೇಳು ಶಾಸಕರ ಬೆಂಬಲಕ್ಕೆ ನಿಂತು ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಸಚಿವೆ ಹಾಗೂ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದರು.   ಯಶವಂತಪುರ ಕ್ಷೇತ್ರ ಬಿ.ಜೆ.ಪಿ ಕಚೇರಿಯ ನಾಗದೇವನಹಳ್ಳಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಪಕ್ಷಗಳ ನಡುವೆ ಭಿನ್ನಾಬಿಪ್ರಾಯ ಸಹಜ. ಈಗ ಎಸ್.ಟಿ.ಸೋಮಶೇಖರ್ ನಮ್ಮ ಪಕ್ಷದ ಸದಸ್ಯರಾಗುವ...
ರಾಜಕೀಯ

ಪವಾಡ ಮಾಡಿದೆ ಒಂದೇ ಒಂದು ಇ ಮೇಲ್-ಕಹಳೆ ನ್ಯೂಸ್

ಕಳೆದ 15 ವರ್ಷಗಳಿಂದ ಚಾಮರಾಜನರ ಜಿಲ್ಲೆಯ ವೀರನಪುರ, ಹರವೆ, ಹೆಗ್ಗವಾಡಿಯ ರಸ್ತೆ ಹಾಳಾಗಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ. ಸುಮಾರು 22 ಕಿಲೋಮೀಟರ್ ಉದ್ದವಿರುವ ಈ ರಸ್ತೆ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದೆ. 15 ವರ್ಷಗಳಿಂದಲೂ ಗುಂಡಿಯಿಂದ ಹದಗೆಟ್ಟಿರುವ ಈ ರಸ್ತೆಯಲ್ಲಿ ಪ್ರತಿ ನಿತ್ಯ ಓಡಾಡುವ ಗ್ರಾಮಸ್ಥರು ಬೇಸತ್ತು ಹೋಗಿದ್ದರು. ಎಷ್ಟೋ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ‌ ಆದರೆ ಇದೀಗ ಒಂದೇ ಒಂದು ಇ ಮೇಲ್ ನಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ....
ರಾಜಕೀಯ

ಪುತ್ತೂರು ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಆಯ್ಕೆ – ಕಹಳೆ ನ್ಯೂಸ್

  ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ನಗರ ಮಂಡಲದ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರು ಆಯ್ಕೆಗೊಂಡಿದ್ದಾರೆ. ಇಂದು ಮದ್ಯಾನ ಬಿಜೆಪಿ ಕಛೇರಿ ಪುತ್ತೂರಿನಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಮುಂದಿನ 15ದಿನಗಳ ಬಳಿಕ ಉಳಿದೆಲ್ಲಾ ಸ್ಥಾನಗಳ ಹಂಚಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ....
ರಾಜಕೀಯ

ಬಳ್ಳಾರಿ | ಕಂಪ್ಲಿ ಪ.ಪಂ. ಬಿಜೆಪಿಗೆ ಬಹುಮತ, ಕೂಡ್ಲಿಗಿ ಪುರಸಭೆ ಅತಂತ್ರ- ಕಹಳೆ ನ್ಯೂಸ್

ಬಳ್ಳಾರಿ/ಹೊಸಪೇಟೆ: ಕಂಪ್ಲಿ ಪುರಸಭೆ ಮತ್ತು ಕೂಡ್ಲಿಗಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದೆ. ಕಂಪ್ಲಿಯಲ್ಲಿ ಹಿಂದಿನ ಅವಧಿಯಲ್ಲಿ ಅಧಿಕಾರ ಅನುಭವಿಸಿದ್ದ ಕಾಂಗ್ರೆಸ್ ಈ ಬಾರಿ ಹಿನ್ನಡೆ ಕಂಡಿದ್ದು, ಬಿಜೆಪಿಗೆ ಬಹುಮತ ದೊರಕಿದೆ. ಕೂಡ್ಲಿಗಿಯಲ್ಲಿ ಯಾವ ಪಕ್ಷಕ್ಕೂ ಜನ ಸ್ಪಷ್ಟ ಜನಾದೇಶ ಕೊಟ್ಟಿಲ್ಲ. ಹೀಗಾಗಿ ಸದ್ಯ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಶತಾಯ ಗತಾಯ ಅಧಿಕಾರ ಹಿಡಿಯಬೇಕು ಎಂದು ಹಗಲಿರುಳೂ ಶ್ರಮಿಸಿದ್ದ ಶಾಸಕ ಜೆ.ಎನ್‌.ಗಣೇಶ್‌ ಅವರಿಗೆ ಮುಖಭಂಗವಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,...
ರಾಜಕೀಯ

ಮಂಗಳೂರು ಪಾಲಿಕೆ ಫೈಟ್ – ರಾಜ್ಯಾಧ್ಯಕ್ಷರ ತವರಿನಲ್ಲಿ ಅರಳಿದ ತಾವರೆ ; ಬೀದಿಜಗಳವಾಡಿ ರಂಪಾಟ ಮಾಡಿದ ಕಾಂಗ್ರೆಸ್ ಗೆ ಹೀನಾಯ ಸೋಲು – ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಫುಲ್ ಖುಷ್ – ಕಹಳೆ ನ್ಯೂಸ್

ಮಂಗಳೂರು, ನ 14 : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಪಾಲಿಕೆಯಲ್ಲಿ ಈ ಬಾರಿ ಭಾರತೀಯ ಜನತಾಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. 60 ವಾರ್ಡ್ ಗಳಲ್ಲಿ 44ರಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. ಇದರಿಂದ ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ಇದರಿಂದ ತೀವ್ರ ಮುಖಭಂಗವಾಗಿದೆ. ಎಸ್ ಡಿಪಿಐ 2 ವಾರ್ಡ್ ಗಳಲ್ಲಿ...
1 126 127 128 129 130 232
Page 128 of 232