Wednesday, May 6, 2026

ರಾಜಕೀಯ

ರಾಜಕೀಯ

ಜೆಡಿಎಸ್‍ನಲ್ಲಿ ಉಲ್ಪಣಗೂಂಡ ಆಂತರಿಕ ಬಂಡಾಯ – ಕಹಳೆ ನ್ಯೂಸ್

ಬೆಂಗಳೂರು: ಜೆಡಿಎಸ್‍ನಿಂದ ಕೆಲವು ಶಾಸಕರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದಿದ್ದು, ಇನ್ನಷ್ಟು ಶಾಸಕರು ಬಂಡಾಯದ ಹಾದಿ ತುಳಿಯುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಹೇಳಿದ್ದಾರೆ. ಅವರ ಈ ಹೇಳಿಕೆ ಇನ್ನಷ್ಟು ಶಾಸಕರು ಪಕ್ಷ ತೊರೆಯುವ ಮುನ್ಸೂಚನೆಗೆ ಪುಷ್ಠಿ ದೊರೆತಂತಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ನೋವುಂಡ ಕುಮಾರ ಸ್ವಾಮಿ ಅವರಿಗೆ ಇದೀಗ ನಮ್ಮ ಶಾಸಕರ ಪೈಕಿ ಹಲವು ಮಂದಿ...
ರಾಜಕೀಯ

Breaking News : 317 ಖಾತೆ, 800 ಕೋಟಿ ಆಸ್ತಿ ಪತ್ತೆ ; ಸೆ.17ರವರೆಗೆ ಇಡಿ ಕಸ್ಟಡಿಗೆ ಡಿಕೆಶಿ – ಕಹಳೆ ನ್ಯೂಸ್

ನವದೆಹಲಿ: ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್  ಅವರ ಇಡಿ ಕಸ್ಟಡಿ ಅವಧಿಯನ್ನು  ವಿಶೇಷ ಕೋರ್ಟ್ 4 ದಿನ ವಿಸ್ತರಿಸಿದೆ. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಮಧ್ಯಾಹ್ನ 3.20ಕ್ಕೆ ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ...
ರಾಜಕೀಯ

ರಾಜಕೀಯದಲ್ಲಿ ಮಸಾಲೆ ಇರಬೇಕು, ಆಗ ಮಾತ್ರ ಪ್ರಚಾರ ಸಿಗುತ್ತದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು : ನೆರೆ, ಬರ, ಕೃಷಿ ಹಾಗೂ ನೇಕಾರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಸರ್ಕಾರದ ಬಗ್ಗೆ ರಾಜ್ಯದ ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಸಫಲರಾಗಿದ್ದಾರೆ ಎಂದು ದ.ಕ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕ್ಲಿಷ್ಟಕರ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಳಿಕ ಸಿಎಂ ಯಡಿಯೂರಪ್ಪ...
ರಾಜಕೀಯ

ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ- ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು, ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಣ್ಣ ನೀರಾವರಿ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಕಡಿರುದ್ಯಾವರ, ನಿಡ್ಡೋಡಿ, ನಿಟ್ಟಡೆ, ಜಳವೂರು, ಪುಚ್ಚಮೊಗರು, ಕಪ್ಸೆ, ಪೊಳಲಿ, ಚಾರ್ವಾಕದಲ್ಲಿ ಅಣೆಕಟ್ಟೆ...
ರಾಜಕೀಯ

ಇಂದು ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ಇಡಿ ಕಚೇರಿಗೆ ತೆರಳಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲಿದ್ದಾರೆ. ಬುಧವಾರ ಸಮನ್ಸ್ ಪಡೆದಿರುವ ಐಶ್ವರ್ಯ, ತಾಯಿ ಸುಮಾ ಹಾಗೂ ಕುಣಿಗಲ್ ಶಾಸಕ ರಂಗನಾಥ್ ಜೊತೆ ಈಗಾಗಲೇ ದೆಹಲಿಯಲ್ಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ಐಶ್ವರ್ಯ ವಿಚಾರಣೆ ಎದುರಿಸಲಿದ್ದಾರೆ. ಹಗರಿಬೊಮನಹಳ್ಳಿಯ ಸೋಲಾರ್ ಪ್ಲಾಂಟ್ ಸೋಲ್ಸ್...
ರಾಜಕೀಯ

ಸೆ. 11ರಂದು ಮೆಲ್ಕಾರ್ ಜಂಕ್ಷನ್‍ನಲ್ಲಿ ರಮನಾಥ ರೈ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್‍ನಿಂದ ಮಾಣಿ ಜಂಕ್ಷನ್ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಾಗಾಗಿದ್ದಾರೆ. ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಅಥವಾ ಸಂಬಂದಪಟ್ಟ ಅಧಿಕಾರಿಗಳಾಗಲಿ, ಯಾರೂ ಗಮನ ಹರಿಸಲಿಲ್ಲ. ಇದರ ವಿರುದ್ದ ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತ್ರತ್ವದಲಿ ಸೆ. 11ನೇ ಬುಧವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೆಲ್ಕಾರ್ ಜಂಕ್ಷನ್‍ನಲ್ಲಿ...
ರಾಜಕೀಯ

ಎನ್‍ಇಡಿಎ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ; ದೇಶದೆಲ್ಲೆಡೆಯಿಂದ ಅಕ್ರಮ ವಲಸಿಗರ ಗಡೀಪಾರು: ಶಾ – ಕಹಳೆ ನ್ಯೂಸ್

ಗುವಾಹಟಿ : ಅಸ್ಸಾಂನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‍ಆರ್‍ ಸಿ) ಅಂತಿಮ ಪಟ್ಟಿಪ್ರಕಟಗೊಂಡ ಬೆನ್ನಲ್ಲೇ, ಕೇವಲ ಅಸ್ಸಾಂ ಅಷ್ಟೇ ಅಲ್ಲ ಇಡೀ ದೇಶದಿಂದಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಗುವಾಹಟಿಯಲ್ಲಿ ನಾಥ್‍ರ್ ಈಸ್ಟ್ ಡೆಮೊಕ್ರಾಟಿಕ್ ಅಲಯನ್ಸ್ (ಎನ್‍ಇಡಿಎ)ನ ನಾಲ್ಕನೇ ಸಮಾವೇಶ ಉದ್ದೇಶಿಸಿ ಮಾತನಾಡಿದ ಶಾ, ಈಶಾನ್ಯ ರಾಜ್ಯಗಳಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳ ವೈಫಲ್ಯದಿಂದಾಗಿ ಸುದೀರ್ಘಕಾಲದ ಉಗ್ರಗಾಮಿತ್ವ...
1 134 135 136 137 138 232
Page 136 of 232