ಕಾಶ್ಮೀರದ ಕ್ಯಾತೆ ತೆಗೆದ ಇಮ್ರಾನ್‍ನನ್ನು ನಡುನೀರಲ್ಲಿ ಕೈಬಿಟ್ಟ ಅಮೆರಿಕ, ಚೀನಾ, ವಿಶ್ವಸಂಸ್ಥೆ- ಕಹಳೆ ನ್ಯೂಸ್
ಜಮ್ಮು ಕಾಶ್ಮೀರಕ್ಕೆ ನೀಡಲಾದ 370ನೇ ವಿಧಿ ತೆರವುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಲು ಮುಂದಾಗಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ, ಅಮೆರಿಕ ಹಾಗೂ ಚೀನಾ ಕೈಕೊಟ್ಟಿದೆ. ಇದರೊಂದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳು ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಆಗಸ್ಟ್ 6ರಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಜಮ್ಮು ಕಾಶ್ಮೀರದಲ್ಲಿ...







