Thursday, April 30, 2026

ರಾಜಕೀಯ

ರಾಜಕೀಯ

Breaking News : ವಿಶ್ವಾಸ ಮತದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪ್ರಚಂಡ ಜಯ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ್ದಾರೆ. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕೃತವಾಗಿ ಕರ್ನಾಟಕದ ಚುಕ್ಕಾಣಿ ಹಿಡಿದಿದೆ. ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲ 224 ಆಗಿದ್ದು 17 ಮಂದಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. 105 ಶಾಸಕರ ಬೆಂಬಲ ಹೊಂದಿದ್ದರಿಂದ ಬಿಎಸ್‍ವೈ ಬಹುಮತ ಸಾಬೀತು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಬಹುಮತ ಸಾಬೀತು ಪಡಿಸಲು 105 ಶಾಸಕರ ಬೆಂಬಲ...
ರಾಜಕೀಯ

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಲಿದ್ದಾರೆ: ದೇವೇಗೌಡರು – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಮತ್ತೆ ದೋಸ್ತಿ ಸರಕಾರ ಮುಂದುವರಿಯುವುದೇ ಎಂದು ಎಲ್ಲರನ್ನು ಕಾಡಿದ್ದ ಪ್ರಶ್ನೆ ಆಗಿತ್ತು. ಆದರೆ ಈಗ ಜೆಡಿಎಸ್ ವರಿಷ್ಠ ಆ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ. ಕಾಂಗ್ರೆಸ್ 2ನೇ ಅತಿ ದೊಡ್ಡ ಪಕ್ಷವಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿರುತ್ತಾರೆ. ಕೇಂದ್ರದ ನಾಯಕರ ಜೊತೆ ಚರ್ಚಿಸಿ ಕಾಂಗ್ರೆಸ್ ಮೈತ್ರಿ ಮುಂದುವರಿಸುವ...
ರಾಜಕೀಯ

ತವರೂರು ಬೂಕನಕೆರೆಗೆ ಹೊರಟ ಸಿ.ಎಂ – ಕಹಳೆ ನ್ಯೂಸ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹುಟ್ಟೂರು ಬೂಕನಕೆರೆ ಕಡೆಗೆ ತೆರಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ತಮ್ಮ ನಿವಾಸದಿಂದ ಜಕ್ಕೂರು ಏರ್‍ಬೇಸ್ ತೆರಳಿದ್ದು, ಮಂಡ್ಯ ಜಿಲ್ಲೆಯ, ಕೆಆರ್ ಪೇಟೆಯಲ್ಲಿರುವ ಬೂಕನಕೆರೆಗೆ ಇಂದು ಭೇಟಿ ನೀಡಲಿದ್ದಾರೆ. ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಂದು ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ಮತ್ತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಯಡಿಯೂರಪ್ಪ ಅವರು ಬೆಳಗ್ಗೆ 9.30ಕ್ಕೆ ದವಳಗಿರಿ ನಿವಾಸದಿಂದ ತೆರಳಿದ್ದಾರೆ,...
ರಾಜಕೀಯ

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಜೆಡಿಎಸ್‍ನ ಶಾಸಕರ ಒಲವು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಸಂಬಂಧ ಜೆಡಿಎಸ್‍ನ ಕೆಲವು ಶಾಸಕರು ಒಲವು ತೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವುದು ಸೂಕ್ತ ಎಂದು ಹೇಳಿದರು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿಗೆ ಬೆಂಬಲ ನೀಡುವ ಪರ ಮಾತನಾಡಿದರೆ, ಇನ್ನು ಕೆಲವರು ಪ್ರತಿಪಕ್ಷದಲ್ಲಿ ಕುಳಿತು ಪಕ್ಷದ...
ರಾಜಕೀಯ

ಬಿಎಸ್‍ವೈ ಇಂದು ಸಂಜೆ ಪ್ರಮಾಣ ವಚನ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲು ವೇದಿಕೆ ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿ ಸಿಕ್ಕಿದೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಜೆಪಿ ರಾಜ್ಯಾಧ್ಯಕ್ಷ, ಇಂದು ಸಂಜೆ 6.15ರ ಒಳಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕು ಎಂದು ಕೋರಿದ್ದೇನೆ. ರಾಜ್ಯಪಾಲರ ಅನುಮತಿ ಸಿಕ್ಕಿದೆ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ವ್ಯಯಕ್ತಿಕ ಪತ್ರ ಬರೆದು ಪ್ರಮಾಣ ವಚನ...
ರಾಜಕೀಯ

ಇಂದು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು: ಕೊನೆಗೂ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ, ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ...
ರಾಜಕೀಯ

ಬರೋಬ್ಬರಿ 1,000 ಕೋ. ರೂಪಾಯಿಗೆ ಶಾಸಕರನ್ನು ಖರೀದಿಸಿದ ಬಿಜೆಪಿ; ಯು ಟಿ ಖಾದರ್ ಆರೋಪ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಅತೃಪ್ತ ಶಾಸಕರ ಖರೀದಿಯೇ ಬಹುದೊಡ್ಡ ಹಗರಣವಾಗಿದ್ದು, ಅದನ್ನು ಅದೇ ಅತೃಪ್ತ ಶಾಸಕರು ಮುಂದಿನ ಮೂರು ತಿಂಗಳಲ್ಲಿ ಬಹಿರಂಗ ಪಡಿಸಲಿದ್ದಾರೆ. ಶಾಸಕರ ಖರೀದಿಗಾಗಿ ಬಿಜೆಪಿಯು ಕನಿಷ್ಠ 1,000 ಕೋ.ರೂ. ಖರ್ಚು ಮಾಡಿರಬಹುದು ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಹಾಗೂ ಪಕ್ಷದಲ್ಲಿ ಕೆಲವೊಮ್ಮೆ ಅಭಿಪ್ರಾಯ ಭೇದಗಳು ಸಹಜ. ಆದರೆ ಅದನ್ನೇ ಬಳಸಿಕೊಂಡ ಬಿಜೆಪಿಯು ಶಾಸಕರ ಖರೀದಿ ಮಾಡಿದೆ....
ರಾಜಕೀಯ

ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಒಲಿದೀತೆ – ಕಹಳೆ ನ್ಯೂಸ್

ಸುಳ್ಯ: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ, ಸರ್ಕಾರ ರಚಿಸುವ ಹೊಸ್ತಿಲಲ್ಲಿದೆ. ಇನ್ನೊಂದೆಡೆ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಒಲಿದೀತೆ ಎಂಬ ಕುರಿತು ಚರ್ಚೆಗಳು ಆರಂಭವಾಗಿವೆ. ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕಾಗಿ ಬಂದಾಗ ಈ ಬಾರಿ ಸಚಿವ ಸ್ಥಾನ ಗ್ಯಾರಂಟಿ ಎಂದು ಸುಳ್ಯದ ಜನತೆ ನಂಬಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸರ್ಕಾರದಲ್ಲೂ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಸದಾನಂದ ಗೌಡರು...
1 145 146 147 148 149 232
Page 147 of 232